ನವದೆಹಲಿ: ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ 19 ವರ್ಷಗಳಿಂದ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ತಮ್ಮ ಪುತ್ರನಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.
Advertisement
ಸಮಾರಂಭದಲ್ಲಿ 3 ಸಾವಿರ ಗಣ್ಯರು ಭಾಗಿಯಾಗುವ ನಿರೀಕ್ಷೆಯಿದ್ದು, ರಾಜ್ಯದ ಕೆಪಿಸಿಸಿ ನಾಯಕರೂ ತೆರಳಿದ್ದಾರೆ. 132 ವರ್ಷಗಳಷ್ಟು ಹಳೆಯದಾದ ಪಕ್ಷದ ಅಧ್ಯಕ್ಷ ಸ್ಥಾನ ಕಳೆದ 45 ವರ್ಷಗಳಿಂದಲೂ ಗಾಂಧಿ ಕುಟುಂಬಸ್ಥರಲ್ಲೇ ಉಳಿದುಕೊಂಡಿದೆ. ಇದೀಗ ರಾಹುಲ್ ಗಾಂಧಿ, ನೆಹರೂ ವಂಶದ 5ನೇ ತಲೆಮಾರಿನ ಕುಡಿಯಾಗಿ ಅಧಿಕಾರ ಸ್ವೀಕರಿಸ್ತಿದ್ದಾರೆ.
Advertisement
Advertisement
ಈ ಮಧ್ಯೆ ಸೋನಿಯಾ ಗಾಂಧಿ ರಾಜಕೀಯದಿಂದಲೇ ನಿವೃತ್ತಿ ತೆಗೆದುಕೊಳ್ತಾರೆ ಎನ್ನಲಾಗಿತ್ತು. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ರಣದೀಪ್ ಸುರ್ಜೇವಾಲ, ಸೋನಿಯಾಗಾಂಧಿ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದಾರೆಯೇ ಹೊರತು ಪಕ್ಷ ಮತ್ತು ರಾಜಕೀಯದಿಂದಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.
Advertisement
ರಾಹುಲ್ ಗಾಂಧಿ ಪಟ್ಟಾಭಿಷೇಕ ಹಿನ್ನೆಲೆಯಲ್ಲಿ ಕಚೇರಿ ಮುಂಭಾಗ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.