ನವದೆಹಲಿ: ಎರಡು ವಾರಗಳಲ್ಲಿ 12ನೇ ಬಾರಿ ಏರಿಕೆ ಆಗುತ್ತಿರುವ ತೈಲ ಬೆಲೆಯು ಪ್ರಧಾನ ಮಂತ್ರಿ ಜನ್ ಧನ್ ಲೂಟ್ ಯೋಜನೆಯ ಭಾಗವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಸತತವಾಗಿ 2 ವಾರಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Pradhan Mantri Jan Dhan LOOT Yojana pic.twitter.com/OQPiV4wXTq
— Rahul Gandhi (@RahulGandhi) April 4, 2022
ಟ್ವೀಟ್‍ನಲ್ಲಿ ಏನಿದೆ?: ಬೈಕ್, ಕಾರು, ಟ್ರಾಕ್ಟರ್ ಮತ್ತು ಟ್ರಕ್‍ಗಳಿಗೆ ಫುಲ್ ಟ್ಯಾಂಕ್ ಇಂಧನದ ಪ್ರಸ್ತುತ ವೆಚ್ಚವನ್ನು 2014ರಲ್ಲಿ ಹೋಲಿಸುವ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರಧಾನ ಮಂತ್ರಿ ಜನ್ ಧನ್ ಲೂಟ್ ಯೋಜನೆ ಎಂದು ಅವರು ಶೀರ್ಷಿಕೆ ನೀಡಿದ್ದಾರೆ.
ತೈಲ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಮುಖ್ಯವಕ್ತಾರ ರಣದೀಪ್ ಸುರ್ಜೇವಾಲಾ ಟ್ವೀಟ್ ಮಾಡಿ, ಮೋದಿ ಸರ್ಕಾರದ ಅಡಿಯಲ್ಲಿ ಪ್ರತಿದಿನ ಬೆಳಗ್ಗೆ ಉತ್ಸಾಹಕ್ಕಿಂತ ಹಣದುಬ್ಬರದ ದುಃಖವನ್ನು ತರುತ್ತದೆ. ಇಂದು ಹೊಸ ಕಂತು ಇಂಧನ ಲೂಟಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಪ್ರತಿ ಲೀಟರ್‍ಗೆ 40ಪೈಸೆ ಹೆಚ್ಚಿಸಲಾಗಿದೆ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹೆಚ್.ಡಿ ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು: ಡಾ.ಕೆ. ಸುಧಾಕರ್
ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಸೋಮವಾರವೂ ಸಹ ಪ್ರತಿ ಲೀಟರ್ ಪೆಟ್ರೋಲ್‍ಗೆ 42 ಪೈಸೆ, ಡಿಸೇಲ್‍ಗೆ 39 ಪೈಸೆ ಏರಿಕೆಯಾಗಿದೆ. ಇದನ್ನೂ ಓದಿ: ಯಾವುದೇ ಧರ್ಮದವರನ್ನು ಹತ್ತಿಕ್ಕುವ ಉದ್ದೇಶ ಸರ್ಕಾರಕ್ಕಿಲ್ಲ: ಸುಧಾಕರ್