ಮಂಡ್ಯ: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಶೂ ಲೇಸ್‍ಗಳನ್ನು ಕಟ್ಟಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Advertisement
ಇಂದು ಮಂಡ್ಯ (Mandya) ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿಗೆ ಸೋನಿಯಾ ಗಾಂಧಿ (Sonia Gandhi) ಅವರು ಸಾಥ್ ನೀಡಿದರು. ಈ ವೇಳೆ ಅಪರೂಪದ ದೃಶ್ಯ ಕಂಡುಬಂದಿದೆ. ಸದ್ಯ ವೈರಲ್ ಆಗುತ್ತಿರುವ ಫೋಟೋದಲ್ಲಿ ರಾಹುಲ್ ಗಾಂಧಿ ತಮ್ಮ ತಾಯಿಯ ಶೂ ಲೇಸ್ ಅನ್ನು ಎಚ್ಚರಿಕೆಯಿಂದ ಕಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಇದೀಗ ಈ ಫೋಟೋ ನೋಡಿ ರಾಹುಲ್ ಗಾಂಧಿ ಸರಳತೆಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್ ಕೊಡುಗೆ ನೀಡಿದ ಇನ್ಫೋಸಿಸ್
Advertisement
From mothers tying shoelaces of their sons to sons tying the mother’s laces- life comes full circle. Our children outgrow our laps but never our hearts. pic.twitter.com/PJu0cLn7zY
— Rohini Singh (@rohini_sgh) October 6, 2022
Advertisement
ಮೆಡಿಕಲ್ ಚೆಕ್‍ಅಪ್‍ಗಾಗಿ ವಿದೇಶಕ್ಕೆ ತೆರಳಿದ್ದ ಸೋನಿಯಾ ಗಾಂಧಿ ಅವರು, ಸೋಮವಾರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಸೋನಿಯಾಗಾಂಧಿ ಅವರು ಮಡಿಕೇರಿ ಮಡಿಕೇರಿಗೆ ತೆರಳಿ ಖಾಸಗಿ ರೆಸಾರ್ಟ್‍ನಲ್ಲಿ ತಂಗಿದ್ದರು. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಚಿಕಿತ್ಸೆ ಫಲಿಸದೆ ಸಾವು
Advertisement
ವೈದ್ಯಕೀಯ ತಪಾಸಣೆಗಾಗಿ ವಿದೇಶದಲ್ಲಿರುವ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಸೋಮವಾರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಿದ್ದರು. ಮೈಸೂರಿನಿಂದ (Mysuru) ಮಡಿಕೇರಿಗೆ (Madikeri) ತೆರಳಿದ ಸೋನಿಯಾಗಾಂಧಿ ಅವರು ಖಾಸಗಿ ರೆಸಾರ್ಟ್‍ನಲ್ಲಿ ತಂಗಿದ್ದರು. ಬಳಿಕ ಇಂದು ಮಂಡ್ಯದ ಬೆಳ್ಳಾಳೆಯಿಂದ ಪಾದಯಾತ್ರೆ ಪ್ರಾರಂಭ ಮಾಡಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಜೊತೆ ಜೊತೆಗೆ ಹೆಜ್ಜೆ ಹಾಕಿದರು.
ಪಾಂಡವಪುರದ ತೂಬಿನಕೆರೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆದ ನಂತರ ತೂಬಿನಕೆರೆಯಿಂದ ಜಕ್ಕನಹಳ್ಳಿಗೆ ಸೋನಿಯಾ ಆಗಮಿಸಿ ಬೆಳಗ್ಗೆ 8 ಗಂಟೆಗೆ ಜಕ್ಕನಹಳ್ಳಿಯಿಂದ ಸಾಂಕೇತಿಕವಾಗಿ ಯಾತ್ರೆಯಲ್ಲಿ ಭಾಗಿಯಾದರು. ಸೋನಿಯಾ ಗಾಂಧಿ ಸುಮಾರು 10-15 ನಿಮಿಷಗಳ ಕಾಲ ನಡೆದರು. ನಂತರ ಪಾದಯಾತ್ರೆ ಮಾಡಿದ್ದು ಸಾಕು ಎಂದು ಹೇಳಿ ಸೋನಿಯಾ ಗಾಂಧಿ ಅವರನ್ನು ಕಾರಿಗೆ ರಾಹುಲ್ ಗಾಂಧಿ ಅವರು ಹತ್ತಿಸಿದರು.