ಬೆಂಗಳೂರು: ಇಂದು ಮಧ್ಯಾಹ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 1:45ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಅಗಲಿದ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.
Advertisement
ರಿಚ್ಮಂಡ್ ಟೌನ್ ನಲ್ಲಿರುವ ರೆಸ್ಟ್ ಹೌಸ್ ಆಪಾರ್ಟ್ ಮೆಂಟ್‍ನಲ್ಲಿ ಆಸ್ಕರ್ ಫರ್ನಾಂಡಿಸ್ ಕುಟುಂಬದ ಸದಸ್ಯರನ್ನ ಭೇಟಿ ಮಾಡಿ ರಾಹುಲ್ ಗಾಂಧಿ ಸಾಂತ್ವನ ಹೇಳಲಿದ್ದಾರೆ.
Advertisement
My heartfelt condolences to the family and friends of Shri Oscar Fernandes Ji.
It is a personal loss for me. He was a guide and mentor to many of us in the Congress Party.
He will be missed and fondly remembered for his contributions. pic.twitter.com/NZVD592GSJ
— Rahul Gandhi (@RahulGandhi) September 13, 2021
Advertisement
ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಬಾರಿ ಸೇವೆ ಸಲ್ಲಿಸಿದ, ಮಾಜಿ ಕೇಂದ್ರ ಸಚಿವ, ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರದ ಮುಂದೆ ಭಗವದ್ಗೀತೆ, ಬೈಬಲ್, ಕುರಾನ್ ಸಮಾಗಮ
Advertisement
ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಬಾರಿ ಸೇವೆ ಸಲ್ಲಿಸಿದ, ಮಾಜಿ ಕೇಂದ್ರ ಸಚಿವ, ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಸೆಪ್ಟೆಂಬರ್ 16, 2021ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಹ್ನ 12 ಗಂಟೆವರೆಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು.
– @DKShivakumar pic.twitter.com/cVDl8ViKSg
— Karnataka Congress (@INCKarnataka) September 15, 2021
ಮಧ್ಯಾಹ್ನ 12:30ಕ್ಕೆ ಕೆಪಿಸಿಸಿ ಕಚೇರಿಯಿಂದ ಮೆರವಣಿಗೆ ಮೂಲಕ ಹೊರಟು ಶಾಂತಿ ನಗರದ ಹೊಸೂರು ರಸ್ತೆಯಲ್ಲಿರುವ ಸೆಂಟ್ ಪ್ಯಾಟ್ರಿಕ್ ಚರ್ಚ್ ನಲ್ಲಿ ಅಂತಿಮ ಪೂಜಾ ವಿಧಿಗಳು ನೆರವೇರಲಿದೆ. ಇದನ್ನೂ ಓದಿ: ಅಗಲಿದ ಕಾಂಗ್ರೆಸ್ ನಾಯಕ ಆಸ್ಕರ್‌ಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ
3 ಗಂಟೆಗೆ ಶಾಂತಿನಗರದ ಹೊಸೂರು ರಸ್ತೆಯ ಸೆಂಟ್ ಪ್ಯಾಟ್ರಿಕ್ ಸ್ಮಶಾನದಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ ನೆರವೇರಲಿದೆ. ರಾಜ್ಯ ಕಾಂಗ್ರೆಸ್ ಎಲ್ಲಾ ಪ್ರಮುಖ ನಾಯಕರುಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.