ಬೆಂಗಳೂರು: ಶುಕ್ರವಾರ (ಆ.8) ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಈ ಹಿನ್ನೆಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗರಿಗೆ ಟ್ರಾಫಿಕ್ (Bengaluru Traffic) ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕೆಲವು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಅವರು ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ದಾಖಲೆ ಬಿಡುಗಡೆ ಮಾಡಲಿದ್ದಾರೆ. ಈ ಹಿನ್ನೆಲೆ ಕೆಲವೆಡೆ ಸಂಚಾರ್ ಬಂದ್ ಮಾಡಿ, ಅವುಗಳಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ.ಇದನ್ನೂ ಓದಿ: ಕಂತೆ ಕಂತೆ ಹಣ ಕೇಸ್ – ನ್ಯಾ.ಯಶವಂತ್ ವರ್ಮಾ ಅರ್ಜಿ ವಜಾ
ಎಲ್ಲೆಲ್ಲಿ ಸಂಚಾರ ಬಂದ್ ಹಾಗೂ ಪರ್ಯಾಯ ಮಾರ್ಗಗಳು ಯಾವವು?
– ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್‌ನಿಂದ ಆನಂದ್ ರಾವ್ ಫ್ಲೈಓವರ್, ಒಲ್ಡ್ ಜೆಡಿಎಸ್ ರಸ್ತೆ, ಶೇಷಾದ್ರಿಪುರ ರಸ್ತೆಯಲ್ಲಿ ಸಂಚಾರ ನಿರ್ಬಂಧಗೊಳಿಸಲಾಗಿದೆ. ಇವುಗಳ ಬದಲು ಲುಲು ಮಾಲ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕರ್, ರೇಸ್ ಕೋರ್ಸ್ ಫ್ಲೈಓವರ್ ಕಡೆಯಿಂದ ಪ್ರಯಾಣಿಸಬಹುದು.
– ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಕಡೆಗೆ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಕೆಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ರಾಜೀವ್ ಗಾಂಧಿ ಸರ್ಕಲ್, ರೇಸ್ ಕೋರ್ಸ್ ಫ್ಲೈಓವರ್ ಮೂಲಕ ಹೋಗಬಹುದು
– ಚಾಲುಕ್ಯದಿಂದ ಮೈಸೂರು ಬ್ಯಾಂಕ್ ಕಡೆಗೆ ಸಂಚಾರ ನಿಷೇಧಿಸಲಾಗಿದ್ದು, ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ನಿಂದ ಸಂಚರಿಸಲು ಸೂಚಿಸಲಾಗಿದೆ.
– ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್‌ಕಡೆಯಿಂದ ಫ್ರೀಡಂಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಕನಕದಾಸ ಜಂಕ್ಷನ್‌ನಿಂದ ಬಲ ತಿರುವು ಪಡೆದು ಸಾಗರ ಜಂಕ್ಷನ್‌ಕಡೆಗೆ ಸಂಚರಿಸಬಹುದು.
– ಮೌರ್ಯ ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂಪಾರ್ಕ್‌ಗೆ ತೆರಳುವವರು ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು.ಇದನ್ನೂ ಓದಿ: ಮಂಡ್ಯದ ದೇವಸ್ಥಾನದಲ್ಲಿ ಕಳ್ಳತನ – ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಎಸ್ಕೇಪ್