ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 52ನೇ ವರ್ಷಕ್ಕೆ ಕಾಲಿಟ್ಟಿರುವ ರಾಹುಲ್ ಗಾಂಧಿ ಅವರು, ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
Advertisement
ಈ ಕುರಿತಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಣಿ, ಪಕ್ಷಿಗಳ ಜೊತೆ ರಾಕಿಭಾಯ್ ಕುಟುಂಬ: ವಿಡಿಯೋ ಹಂಚಿಕೊಂಡ ಯಶ್
Advertisement
कांग्रेस कार्यकर्ताओं और शुभचिंतकों के नाम श्री @RahulGandhi की अपील pic.twitter.com/a99UowmKC4
— Jairam Ramesh (@Jairam_Ramesh) June 18, 2022
Advertisement
ನನ್ನ ಜನ್ಮದಿನದಂದು ಯಾವುದೇ ರೀತಿಯ ಆಚರಣೆಗಳನ್ನು ಮಾಡಬೇಡಿ ಎಂದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ದೇಶಾದ್ಯಂತವಿರುವ ನನ್ನ ಹಿತೈಷಿಗಳಿಗೆ ಮನವಿ ಮಾಡುತ್ತೇನೆ. ದೇಶದಲ್ಲಿ ಸದ್ಯದ ಪರಿಸ್ಥಿತಿ ಹದಗೆಟ್ಟಿದೆ. ಕೋಟಿಗಟ್ಟಲೆ ಯುವಕರು ಗೊಂದಲಕ್ಕೊಳಗಾಗಿದ್ದಾರೆ. ನಾವು ಯುವಕರು ಮತ್ತು ಅವರ ಕುಟುಂಬಸ್ಥರ ನೋವಿನಲ್ಲಿ ಪಾಲ್ಗೊಳ್ಳಬೇಕು ಮತ್ತು ಅವರೊಂದಿಗೆ ನಿಲ್ಲಬೇಕು ಎಂದು ರಾಹುಲ್ ಗಾಂಧಿ ತಿಳಿಸಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಯಾವುದೇ ಧರ್ಮದವರಿಗೆ ನೋಯಿಸುವ ಉದ್ದೇಶವಿಲ್ಲ – ಕ್ಷಮೆಯಾಚಿಸಿದ ಸಾಯಿ ಪಲ್ಲವಿ
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಎದುರಿಸುತ್ತಿರುವ ರಾಹುಲ್ ಗಾಂಧಿ, ಸರ್ಕಾರವು ನಾಲ್ಕು ವರ್ಷಗಳ ಅವಧಿಗೆ ಯುವಕರನ್ನು ಮಿಲಿಟರಿಗೆ ನೇಮಿಸಿಕೊಳ್ಳುವ ಅಗ್ನಿಪಥ್ ಯೋಜನೆ ವಿರುದ್ಧ ಧ್ವನಿ ಎತ್ತಿದ್ದಾರೆ. ಇದೇ ವೇಳೆ ಸೋನಿಯಾ ಗಾಂಧಿ ಅವರ ಆರೋಗ್ಯ ಹಗೆಟ್ಟಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಅವರಿಗೆ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ಅವಕಾಶ ನೀಡಿರುವ ಕಾರಣ, ರಾಹುಲ್ ಗಾಂಧಿ ಒಬ್ಬರೇ ಮತ್ತೆ ಸೋಮವಾರ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.