ನವದೆಹಲಿ: ಅನ್ನದಾತರ ಸತ್ಯಾಗ್ರಹ ಅಹಂಕಾರವನ್ನು ಅಡಗಿಸಿತು. ಅನ್ಯಾಯದ ವಿರುದ್ಧ ಗೆಲುವಿಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸತತ 355 ದಿನಗಳ ಕಾಲ ರೈತರು ನಡೆಸಿದ್ದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಕಳೆದ ವರ್ಷ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ಜಾರಿಗೊಳಿಸಿತ್ತು. ಈ ಕುರಿತಂತೆ ದೇಶದ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಅಂದಿನಿಂದ ಇಂದಿನವರೆಗೂ ರೈತರು ಕೃಷಿ ಕಾನೂನನ್ನು ವಾಪಸ್ಸು ಪಡೆಯುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ.
ಈ ಕುರಿತಂತೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಅನ್ನದಾತರ ಸತ್ಯಾಗ್ರಹ ಅಹಂಕಾರವನ್ನು ಅಡಗಿಸಿತು. ಅನ್ಯಾಯದ ವಿರುದ್ಧ ಗೆಲುವಿಗೆ ಅಭಿನಂದನೆಗಳು. ಜೈ ಹಿಂದ್ ಜೈ ಹಿಂದ್ ಕಾ ಕಿಸಾನ್ ಎಂದು ಟ್ವೀಟ್ ಮಾಡುವ ಮೂಲಕ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
टूट गया अभिमान, जीत गया मेरे देश का किसान।
— Congress (@INCIndia) November 19, 2021
ಈ ಮುನ್ನ ಜನವರಿ 14ರಂದೇ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಕೃಷಿ ಕಾನೂನನ್ನು ವಾಪಸ್ ಪಡೆಯಲೇಬೇಕಾಗುತ್ತದೆ ಎಂಬ ಹೇಳಿಕೆ ನೀಡಿದ್ದರು. ಇದೀಗ ಈ ಮಾತು ಸತ್ಯವಾಗಿದೆ.
देश के अन्नदाता ने सत्याग्रह से अहंकार का सर झुका दिया।
अन्याय के खिलाफ़ ये जीत मुबारक हो!
जय हिंद, जय हिंद का किसान!#FarmersProtest https://t.co/enrWm6f3Sq
— Rahul Gandhi (@RahulGandhi) November 19, 2021
ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸಲು ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದರು.