ಜಾರ್ಖಂಡ್, ವಯನಾಡಲ್ಲಿ ಕಾಂಗ್ರೆಸ್ ಗೆಲುವಿಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

Public TV
2 Min Read
RAHUL GANDHI

ನವದೆಹಲಿ: ಮಹಾರಾಷ್ಟ್ರ, ಜಾರ್ಖಂಡ್ ಸೇರಿದಂತೆ ಇನ್ನಿತರ ಚುನಾವಣೆಗಳ ಫಲಿತಾಂಶ ಇಂದು (ನ.23) ಹೊರಬಿದ್ದಿದ್ದು, ಜಾರ್ಖಂಡ್ ಹಾಗೂ ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯಕ್ಕೆ ರಾಹುಲ್ ಗಾಂಧಿ (Rahul Gandhi) ಟ್ವೀಟ್ ಮೂಲಕ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ `ಇಂಡಿಯಾ’ ಒಕ್ಕೂಟಕ್ಕೆ ಮತಚಲಾಯಿಸಿ ಗೆಲುವು ನೀಡಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಸಿಎಂ ಹೇಮಂತ್ ಸೊರೆನ್ ಅವರಿಗೆ ಹಾಗೂ ಕಾಂಗ್ರೆಸ್, ಜೆಎಂಎಂ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಈ ಗೆಲುವು ಕೇವಲ ಸಂವಿಧಾನದ ಜಯವಲ್ಲ. ಇದು ನೆಲ, ಜಲ, ಅರಣ್ಯಕ್ಕೆ ಸಲ್ಲುವ ಜಯವಾಗಿದೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗಲು 5 ವರ್ಷದ ಮಗುವನ್ನು ಕೊಂದ ತಾಯಿ

ಇನ್ನೂ ಮಹರಾಷ್ಟ್ರದ ಚುನಾವಣಾ ಫಲಿತಾಂಶ ಕುರಿತು ಹಂಚಿಕೊಂಡು, ರಾಜ್ಯದ ಎಲ್ಲಾ ಮತದಾರರಿಗೆ, ಕಾರ್ಯಕರ್ತರ ಶ್ರಮಕ್ಕಾಗಿ ಧನ್ಯವಾದಗಳು ತಿಳಿಸುತ್ತೇನೆ. ಆದರೆ ಮಹಾರಾಷ್ಟ್ರದ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಈ ಕುರಿತು ವಿವರವಾಗಿ ವಿಶ್ಲೇಷಣೆ ನಡೆಸುತ್ತೇವೆ ಎಂದಿದ್ದಾರೆ.

ವಯನಾಡಿನಲ್ಲಿರುವ ನನ್ನ ಕುಟುಂಬದ ಜನತೆ ಪ್ರಿಯಾಂಕಾ ಅವರ ಮೇಲೆ ಇಟ್ಟಿರುವ ನಂಬಿಕೆಯ ಕುರಿತು ನನಗೆ ಹೆಮ್ಮೆಯಿದೆ. ವಯನಾಡಿನ ಪ್ರಗತಿಗಾಗಿ ಪ್ರಿಯಾಂಕಾ ಧೈರ್ಯದಿಂದ ಮುನ್ನಡೆಯುತ್ತಾಳೆ ಎಂದು ನಾನು ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಜಾರ್ಖಂಡ್‌ನ ಜೆಎಂಎಂ ನೇತೃತ್ವದ ಇಂಡಿಯಾ ಒಕ್ಕೂಟ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ 21ರಲ್ಲಿ ಗೆಲುವು ಸಾಧಿಸಿದೆ.

ಸಂಜೆ 7 ಗಂಟೆಯವರೆಗೆ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಹಾವಿಕಾಸ ಅಘಾಡಿ 1 ಹಾಗೂ ಪಕ್ಷೇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.ಇದನ್ನೂ ಓದಿ: ಯಶ್‌ ನಟನೆಯ ‘ಟಾಕ್ಸಿಕ್‌’ ಸೆಟ್‌ನಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಬಾಲಿವುಡ್‌ ನಟಿ

Share This Article