ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಅಹಮದಾಬಾದ್‌ನ ಆಸ್ಪತ್ರೆಯಲ್ಲಿದ್ದಾರೆ ಎಂಬ ವರದಿಗಳು ಹೊರಬಂದ ಬೆನ್ನಲ್ಲೇ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಅಭಯ ನೀಡಿದ್ದಾರೆ.
ಟ್ವೀಟ್‌ನಲ್ಲಿ ಏನಿದೆ?: ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಬೆಲೆ ಕಟ್ಟಲಾಗದು. ಮೋದಿ ಅವರ ಈ ಕಷ್ಟದ ಸಮಯದಲ್ಲಿ ನನ್ನ ಪ್ರೀತಿ ಮತ್ತು ಬೆಂಬಲವಿದೆ. ನಿಮ್ಮ ತಾಯಿ ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
एक मां और बेटे के बीच का प्यार अनन्त और अनमोल होता है।
मोदी जी, इस कठिन समय में मेरा प्यार और समर्थन आपके साथ है। मैं आशा करता हूं आपकी माताजी जल्द से जल्द स्वस्थ हो जाएं।
— Rahul Gandhi (@RahulGandhi) December 28, 2022
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತಾಯಿಯ ಭೇಟಿಗೆ ಮೋದಿ ತುರ್ತಾಗಿ ಅಹಮದಾಬಾದ್ ತೆರಳಿದ್ದಾರೆ. ಉಳಿದಂತೆ ಆಸ್ಪತ್ರೆ ಯಾವುದೇ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ.
ಈ ಹಿನ್ನೆಲೆಯಲ್ಲಿ ಗುಜರಾತ್‌ನ ಬಿಜೆಪಿ ಶಾಸಕರಾದ ದರ್ಶನಾಬೆನ್ ವಘೇಲಾ ಮತ್ತು ಕೌಶಿಕ್ ಜೈನ್ ಆಸ್ಪತ್ರೆಗೆ ಆಗಮಿಸಿ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ್ದಾರೆ. ಇದನ್ನೂ ಓದಿ: ಮೆಟ್ರೋದಲ್ಲಿ ನಿದ್ರೆ ಮಂಪರಲ್ಲಿ ಬೀಳ್ತಿದ್ದ ಯುವಕನಿಗೆ ಪಕ್ಕದಲ್ಲಿದ್ದ ಯುವತಿ ಮಾಡಿದ್ದೇನು ಗೊತ್ತಾ?
ಈ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಇದನ್ನೂ ಓದಿ: ಹೀರಾಬೆನ್ ಆರೋಗ್ಯ ಸ್ಥಿರ – ತಾಯಿ ಭೇಟಿಗೆ ಅಹಮದಾಬಾದ್ ತೆರಳಿದ ಮೋದಿ