ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾರತೀಯ ಸೇನಾಪಡೆಯ ಶ್ವಾನದಳದಿಂದ ಯೋಗ ಮಾಡುವ ಚಿತ್ರವನ್ನು ಪೋಸ್ಟ್ ಮಾಡಲಾಗಿತ್ತು. ಈ ಚಿತ್ರವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡು ಇದು ನವಭಾರತ (ನ್ಯೂ ಇಂಡಿಯಾ) ಎಂದು ಕ್ಯಾಪ್ಷನ್ ಹಾಕುವ ಮೂಲಕ ಟ್ರೋಲ್ ಆಗಿದ್ದಾರೆ.
Advertisement
ಟ್ವೀಟ್ ಮಾಡಿರುವ ಚಿತ್ರಗಳಲ್ಲಿ ಸೈನ್ಯದ ಶ್ವಾನ ಘಟಕ ಮತ್ತು ತರಬೇತುದಾರರು ಯೋಗ ನಮಸ್ಕಾರ ಮಾಡುತ್ತಿದ್ದಾರೆ.
Advertisement
ರಾಹುಲ್ ಗಾಂಧಿ ಅವರ ಟ್ವೀಟ್ ಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ತಮ್ಮ ಸಾಕು ನಾಯಿಯ ಚಿತ್ರಗಳನ್ನು ಪೋಸ್ಟ್ ಮಾಡುತ್ತಿದ್ದ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದೆ. ರಾಹುಲ್ ಗಾಂಧಿ ತಮ್ಮ ಸಾಕು ನಾಯಿಯ ಕುರಿತು ಪೋಸ್ಟ್ ಮಾಡುತ್ತಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವ ಭಾರತ ನಿರ್ಮಾಣವಾಗುತ್ತಿದ್ದರೆ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೊಸ ಕಾಂಗ್ರೆಸ್ ಹೊರಹೊಮ್ಮುತ್ತಿದೆ ಎಂದು ಟೀಕಿಸಿದೆ.
Advertisement
New India. pic.twitter.com/10yDJJVAHD
— Rahul Gandhi (@RahulGandhi) June 21, 2019
Advertisement
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನವ ಭಾರತ ನಿರ್ಮಾಣವಾಗುತ್ತಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಹೊಸ ಕಾಂಗ್ರೆಸ್ ಹೊರಹೊಮ್ಮುತ್ತಿರುವುದು ಅವರ ಟ್ವೀಟ್ ಮೂಲಕ ತಿಳಿದಿದೆ ಎಂದು ಬಿಜೆಪಿ ಕಿಡಿ ಕಾರಿದೆ. ಬಹುಶಃ ಅವರಿಗೆ ಜೀವನವೇ ಒಂದು ನಿರಂತರ ತಮಾಷೆಯಾಗಿದ್ದು, ಅವರ ನೆಚ್ಚಿನ ಪಿಡಿ(ಮುದ್ದಿನ ನಾಯಿ)ಯನ್ನು ನೆನಪಿಸುವ ಚಿತ್ರಗಳನ್ನು ಪೋಸ್ಟ್ ಮಾಡಲು ಅವಕಾಶ ಹುಡುಕುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ಟೀಕಿಸಿದ್ದಾರೆ.
ಟ್ವಿಟ್ಟರ್ ನಲ್ಲಿಯೂ ಸಹ ರಾಹುಲ್ ಗಾಂಧಿ ಟ್ರೋಲ್‍ಗೆ ಒಳಗಾಗಿದ್ದು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಚಿತ್ರಗಳನ್ನು ಎಡಿಟ್ ಮಾಡಿ ನೆಟ್ಟಿಗರು ಪೋಸ್ಟ್ ಮಾಡುತ್ತಿದ್ದಾರೆ. ಈ ಮೂಲಕ ಟ್ವಿಟ್ಟರ್ ನಲ್ಲಿ ರಾಹುಲ್ ಗಾಂಧಿ ಟ್ರೋಲ್‍ಗೆ ಗುರಿಯಾಗಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]