ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅನಾರೋಗ್ಯದ ಕಾರಣ ಇಂದು (ಭಾನುವಾರ) ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ‍್ಯಾಲಿಗೆ ಗೈರಾಗಿದ್ದಾರೆ.
ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್‌ನ ರಾಂಚಿಯಲ್ಲಿ ವಿಪಕ್ಷಗಳ ಮೈತ್ರಿಕೂಟದ ಮೆಗಾ ರ‍್ಯಾಲಿಯಲ್ಲಿ ಭಾಗವಹಿಸಿ ರಾಹುಲ್ ಗಾಂಧಿ ಪ್ರಚಾರ ನಡೆಸಬೇಕಿತ್ತು. ಆದರೆ ಅನಾರೋಗ್ಯದಿಂದ ಗೈರಾಗಿದ್ದಾರೆ ಎಂದು ಕಾಂಗ್ರೆಸ್‌ನ (Congress) ಜೈರಾಮ್ ರಮೇಶ್ ತಿಳಿಸಿದ್ದಾರೆ. ಇದನ್ನೂ ಓದಿ: ವಯನಾಡ್‌ನಲ್ಲಿ ರಾಹುಲ್‌ಗೆ ಬಿಗ್ ಶಾಕ್ – ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ
Advertisement
श्री राहुल गांधी आज सतना और रांची में चुनाव प्रचार के लिए पूरी तरह से तैयार थे, जहां INDIA की रैली हो रही है। लेकिन वह अचानक बीमार हो गए हैं और फिलहाल नई दिल्ली से बाहर नहीं जा सकते हैं। कांग्रेस अध्यक्ष श्री मल्लिकार्जुन खरगे जी अवश्य सतना में जनसभा को संबोधित करने के बाद रांची…
— Jairam Ramesh (@Jairam_Ramesh) April 21, 2024
Advertisement
ರಾಹುಲ್ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ದೆಹಲಿಯಿಂದ ಹೊರಡಲು ಸಾಧ್ಯವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ನಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ ರಾಂಚಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎಕ್ಸ್ ಖಾತೆಯಲ್ಲಿ ಜೈರಾಮ್ ರಮೇಶ್ ಬರೆದುಕೊಂಡಿದ್ದಾರೆ.
Advertisement
ಸೋನಿಯಾ ಗಾಂಧಿ, ಪಕ್ಷದ ಸಂಸದ ರಾಹುಲ್ ಗಾಂಧಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಇಂಡಿಯಾ ಒಕ್ಕೂಟದ ನಾಯಕರ ಪೋಸ್ಟರ್‌ಗಳನ್ನು ರಾಂಚಿಯಲ್ಲಿ ಮೆಗಾ ರ‍್ಯಾಲಿಗೂ ಮುನ್ನ ಹಾಕಲಾಗಿತ್ತು. ಇದನ್ನೂ ಓದಿ: Madhya Pradesh : ಮಹಿಳೆ ಮೇಲೆ 1 ತಿಂಗಳ ಕಾಲ ರೇಪ್ – ಜೆಸಿಬಿಯಿಂದ ಆರೋಪಿಯ ಮನೆ ಧ್ವಂಸ
Advertisement
ಖರ್ಗೆ ಅಲ್ಲದೇ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮತ್ತು ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ರಾಂಚಿಯಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿತ್ತು.