ಪಂಚಮಸಾಲಿ ಮಠಕ್ಕೆ ರಾಹುಲ್ ಗಾಂಧಿ ಭೇಟಿ

Public TV
1 Min Read
rahul gandhi 4

ದಾವಣಗೆರೆ : ಪಂಚಮಸಾಲಿ ಮಠಕ್ಕೆ ಕಾಂಗ್ರೆಸ್‌ (Congress) ಮುಖಂಡ ರಾಹುಲ್‌ ಗಾಂಧಿ (Rahul Gandhi) ಭೇಟಿ ನೀಡಿ ವಚನಾನಂದ ಸ್ವಾಮೀಜಿಯ (Vachanananda Swamiji) ಆಶೀರ್ವಾದ ಪಡೆದರು.

ರಾಜ್ಯ ವಿಧಾನಸಭಾ ಚುನಾವಣೆಗೆ (Election) ಇನ್ನೆನೂ ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿದೆ. ಪ್ರಚಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ದಾವಣಗೆರೆಗೆ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿಯ ಪಂಚಮಸಾಲಿ ಮಠಕ್ಕೆ ಭೇಟಿ ನೀಡಿದರು. ಇದನ್ನೂ ಓದಿ: ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್‌ ಗ್ರೇಟ್‌ ಎಸ್ಕೇಪ್‌

rahul gandhi 1 1

ಈ ವೇಳೆ ರಾಹುಲ್‌ ಗಾಂಧಿ ಅವರು ವಚನಾನಂದ ಸ್ವಾಮೀಜಿಯ ಆಶೀರ್ವಾದ ಪಡೆದು ಕೆಲ ಕಾಲ ಸಮಾಲೋಚನೆ ನಡೆಸಿದರು. ಅದಾದ ಬಳಿಕ ರಾಹುಲ್‌ ಗಾಂಧಿಗೆ ವಚನಾನಂದ ಶ್ರೀ ಆಶೀರ್ವದಿಸಿದರು. ಈ ವೇಳೆ ರಾಹುಲ್‌ ಗಾಂಧಿಗೆ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸಾಥ್‌ ನೀಡಿದರು. ಇದನ್ನೂ ಓದಿ: ಸಿಎಂ ಆರ್‌.ಗುಂಡೂರಾವ್‌ ಸೋಲಿಸಿದ್ದ ಮಾಜಿ ಸಚಿವ ಜೀವಿಜಯ ಕಾಂಗ್ರೆಸ್‌ಗೆ ರಾಜೀನಾಮೆ

Share This Article