ಚಂಡೀಗಢ: ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದ ಪಂಜಾಬಿ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ನಿವಾಸಕ್ಕೆ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
Advertisement
ಈ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಜ್ವಾ ಸೇರಿದಂತೆ ಹಲವು ನಾಯಕರು ರಾಹುಲ್ ಗಾಂಧಿ ಜೊತೆಗಿದ್ದರು. ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ – ವಿವಾದಿತ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ದೆಹಲಿ ಪೊಲೀಸರಿಂದ ಭದ್ರತೆ
Advertisement
ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ಭದ್ರತೆಯನ್ನು ಹೆಚ್ಚು ಮಾಡಲಾಗಿತ್ತು. ಸಿಧು ಮೂಸೆವಾಲಾ ಹತ್ಯೆ ಬಳಿಕ ಹಲವು ಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದು, ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅದಕ್ಕೂ ಮುನ್ನ ಸಿಎಂ ಭಗವಂತ್ ಮಾನ್ ಭೇಟಿ ನೀಡಿದ್ದರು.
Advertisement
Advertisement
ಸಿಧು ಮೂಸೆವಾಲಾ, ಪಂಜಾಬ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ್ದು, ಮಾನ್ಸಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಮೇ 29 ರಂದು ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಅವರ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ಭರವಸೆಯ ನಾಯಕ ಮತ್ತು ಪ್ರತಿಭಾವಂತ ಕಲಾವಿದ ಸಿಧು ಮೂಸೆವಾಲಾ ಅವರ ಹತ್ಯೆಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಪ್ರಪಂಚದಾದ್ಯಂತದ ಅವರ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಹೇಳಿದ್ದರು. ಇದನ್ನೂ ಓದಿ: ಅಗಲಿದ ಕೆಕೆ ಕೊನೆ ಹಾಡು ರಿಲೀಸ್ : ಭಾವುಕರಾದ ಕೇಳುಗರು