Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ

Latest

ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ

Public TV
Last updated: April 30, 2025 8:42 pm
Public TV
Share
3 Min Read
Rahul Gandhi 4
SHARE

– ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು; ರಾಗಾ
– ಪಹಲ್ಗಾಮ್ ದಾಳಿಯಲ್ಲಿ ಮೃತರಾದವರಿಗೆ ಹುತಾತ್ಮರ ದರ್ಜೆ, ಗೌರವ ನೀಡಬೇಕು

ನವದೆಹಲಿ: ಕೇಂದ್ರ ಸರ್ಕಾರದ ಜಾತಿ ಜನಗಣತಿ (Caste Census) ನಿರ್ಧಾರ ತಡವಾದರೂ ನಾನು ಇದನ್ನೂ ಸ್ವಾಗತ ಮಾಡುತ್ತೇನೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದರು.

ದೆಹಲಿಯಲ್ಲಿ (Delhi) ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿಯ ಸಮಯದಲ್ಲೇ ಜಾತಿ ಜನಗಣತಿ ಯಾಕೆ ಘೋಷಣೆ ನಿರ್ಧಾರ ಯಾಕೆ ಮಾಡಿದ್ದಾರೆ ಎನ್ನುವುದು ನಂಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇದು ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು. ಇದನ್ನು ಹೇಗೆ ಮಾಡ್ತಾರೆ ಎಂದು ಹೇಳಬೇಕು ಎಂದರು. ಇದನ್ನೂ ಓದಿ: ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರು ಕೇವಲ 4 ಜಾತಿಗಳು ಎಂದಿದ್ದರು. ಈಗ ಏಕಾಏಕಿ ಜಾತಿಗಣತಿ ಬಗ್ಗೆ ಘೋಷಣೆ ಮಾಡಿದ್ದಾರೆ. ಕೇವಲ ಮೀಸಲಾತಿ ಪ್ರಾಮುಖ್ಯತೆ ನೀಡುವುದಲ್ಲ. ಪ್ರತಿಯೊಬ್ಬರಿಗೆ ನ್ಯಾಯ ಸಿಗುವಂತೆ ಮಾಡಬೇಕಾಗಿದೆ ಹೇಳಿದರು. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ


ಜಾತಿಗಣತಿ ಹಾಗೂ ಜನಗಣತಿಗೆ ಅವಧಿ, ಸಮಯ ನಿರ್ಧಾರ ಮಾಡಬೇಕು. ಬಜೆಟ್‌ನಲ್ಲಿ ಹಣವನ್ನು ನಿಗದಿಪಡಿಸಬೇಕು. ಬಜೆಟ್‌ನ್ನು ಹಣ ತೆಗೆದಿರಿಸುವ ಬಗ್ಗೆ ಮಾಹಿತಿ ನೀಡಬೇಕು. ನಮ್ಮ ಆಗ್ರಹ, ಒತ್ತಡಕ್ಕೆ ಪ್ರಧಾನಿ ಮೋದಿ ಅವರು ಸ್ಪಂದಿಸಿದಕ್ಕೆ ಅವರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು.

ನಮ್ಮ ಪಕ್ಷ ಸಮೀಕ್ಷೆಗೆ ಆಗ್ರಹಿಸಿ ದೇಶದಲ್ಲೆಡೆ ಅಭಿಯಾನ ಆರಂಭಿಸಿದ್ದೆವು. ಜಾತಿಗಣತಿಯಿಂದಾಗಿ ಅಭಿವೃದ್ದಿಗೆ ಹಲವು ದಾರಿಗಳು ತೆರಯುತ್ತವೆ. ಕರ್ನಾಟಕದ ಜಾತಿಗಣತಿ ಮುಂದಿನ ದಿನಗಳಲ್ಲಿ ಮಾದರಿಯಾಗಲಿದೆ. ಪ್ರಧಾನಿ ಮೋದಿ ಕೈಗೊಂಡ ನಿರ್ಧಾರ ಮಹತ್ವದಾಗಿದೆ ಎಂದರು. ಇದನ್ನೂ ಓದಿ: ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಕೇಂದ್ರ ಸರ್ಕಾರ

ದಲಿತರು ಆದಿವಾಸಿಗಳಿಗೆ ಅವಕಾಶ ಸಿಗುತ್ತಿಲ್ಲ. 90% ಜನರು ಅವಕಾಶ ವಂಚಿತರಿದ್ದಾರೆ. ಗಿಗ್ ವರ್ಕರ್‌ಗಳಿಗೆ ನಾವು ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಕಾನೂನು ತರುತ್ತಿದ್ದೇವೆ ಎಂದು ತಿಳಿಸಿದರು.

ಪಹಲ್ಗಾಮ್ ದಾಳಿಯಲ್ಲಿ (Pahalgam Attack) ಮೃತಪಟ್ಟವರ ಮನೆಗಳಿಗೆ ತೆರಳಿದ ವಿಚಾರವಾಗಿ ಪ್ರತಿಕ್ರಿಯಿಸಿ, ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಉಗ್ರರು (Terrorists) ಮಾನವೀಯತೆ ಇಲ್ಲದೇ 26 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಇದು ಹೇಗೆ ಆಯ್ತು ಅಂತಾ ಕೇಳಲ್ಲ. ಯಾರು ಇದನ್ನು ಮಾಡಿದ್ದಾರೆ. ಎಲ್ಲಿದ್ದಾರೆ, ಯಾರೇ ಆಗಿದ್ದರು ಅವರಿಗೆ ಸೂಕ್ತ ತಿರುಗೇಟು ನೀಡಬೇಕು. ಭಾರತದ ಜೊತೆಗೆ ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅವರಿಗೆ ನೆನಪಿರಬೇಕು ಎಂದರು. ಇದನ್ನೂ ಓದಿ: ನಾವು ಬಿರುಗಾಳಿ ಬೀಸಿದ್ರೂ ʻಅಲ್ಲಾಹು ಅಕ್ಬರ್ʼ ಅಂತೀವಿ – ಪಹಲ್ಗಾಮ್ ಜಿಪ್‌ಲೈನ್ ಆಪರೇಟರ್ ತಂದೆ

ಇದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿಪಕ್ಷಗಳ ಸಭೆಯಲ್ಲಿ ನಾವು ಹೇಳಿದ್ದೇವೆ. ವಿಪಕ್ಷಗಳು ಸರ್ಕಾರಕ್ಕೆ 100% ಬೆಂಬಲ ನೀಡಿದ್ದೇವೆ. ನರೇಂದ್ರ ಮೋದಿ (Narendra Modi) ಅವರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಕೃತ್ಯ ಮಾಡಿದವರು ಬೆಲೆ ತೆರಬೇಕು. ಇದನ್ನು ಸಂತ್ರಸ್ತರ ಕುಟುಂಬ ಸಂದೇಶ ನೀಡಲು ಹೇಳಿದ್ದಾರೆ. ದಾಳಿಯಲ್ಲಿ ಮೃತರಾದವರಿಗೆ ಹುತಾತ್ಮರ ದರ್ಜೆ, ಗೌರವ ನೀಡಬೇಕು ಎಂದು ಕೇಂದ್ರಕ್ಕೆ ಆಗ್ರಹಿಸಿದರು.

ಮೋದಿ ಅವರು ಸಮಯ ವ್ಯರ್ಥ ಮಾಡಬಾರದು. ಇಂತಹ ದಾಳಿಗಳನ್ನು ಸಹಿಸಲ್ಲ ಎನ್ನುವ ಸಂದೇಶ ನೀಡಬೇಕು. ಗೊಂದಲಗಳಲ್ಲಿ ನಿರ್ಧಾರ ಕೈಗೊಳ್ಳಬಾರದು. ಸ್ಪಷ್ಟವಾದ ನಿಲುವು ತೆಗೆದುಕೊಳ್ಳಬೇಕು. ಉಗ್ರರ ದಾಳಿ ವಿರುದ್ಧ ಪ್ರಧಾನಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಅವರ ಎಲ್ಲಾ ನಿರ್ಧಾರಕ್ಕೂ ವಿಪಕ್ಷಗಳು ಕೈಜೋಡಿಸುತ್ತೇವೆ ಎಂದು ಬೆಂಬಲ ಸೂಚಿಸಿದರು.

TAGGED:Caste Censusnarendra modinewdelhiPahalgam Terror AttackRahul Gandhiಜಾತಿ ಜನಗಣತಿನರೇಂದ್ರ ಮೋದಿನವದೆಹಲಿಪಹಲ್ಗಾಮ್‌ ಉಗ್ರರ ದಾಳಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?