ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನೀಡಿದ ಭರವಸೆ ಈಡೇರಿಸಿಲ್ಲ. ಆದರಿಂದ ರಾಹುಲ್ ಗಾಂಧಿ ಅವರೇ ದೇಶದ ಮುಂದಿನ ಪ್ರಧಾನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೋದಿ ಸರ್ಕಾರದ ವೈಫಲ್ಯಗಳಿಂದಾಗಿ ನಾನು ಅವರು ಮತ್ತೊಮ್ಮೆ ಪ್ರಧಾನಿ ಆಗುವುದಿಲ್ಲ ಎಂದಿದ್ದೇನೆ. ಜನತೆಗೆ ನೀಡಿದ ಭರವಸೆಯನ್ನು ಅವರು ಈಡೇರಿಸಿಲ್ಲ. ಅಲ್ಲದೆ ರಾಹುಲ್ ಗಾಂಧಿ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ, ಅವರೇ ಈ ದೇಶದ ಮುಂದಿನ ಪ್ರಧಾನಿ ಎಂದರು.
Advertisement
Advertisement
ಲೋಕಸಭಾ ಚುನಾವಣಾ ತಯಾರಿ ನಡೆಯುತ್ತಿದೆ. ಜೆಡಿಎಸ್- ಕಾಂಗ್ರೆಸ್ ಸ್ಥಾನ ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನ ಕರೆಸಬೇಕೆಂಬ ಬೇಡಿಕೆ ಇದೆ. ಅವರು ಉತ್ತರ ಪ್ರದೇಶದತ್ತ ಹೆಚ್ಚು ಗಮನ ಹರಿಸಿದ್ದಾರೆ. ಅವರಿಗೆ ಸಮಯ ಇದ್ದರೆ ಕರ್ನಾಟಕಕ್ಕೂ ಕರೆಸುತ್ತೇವೆ. ಸುಮಲತಾ ಅವರು ನಿನ್ನೆ ನನ್ನನ್ನು ಭೇಟಿಯಾಗಿದ್ದರು. ಅಲ್ಲದೆ ಅವರು ಮಂಡ್ಯ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ. ಚುನಾವಣಾ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
Advertisement
Advertisement
ಮೈಸೂರಿನಿಂದ ದೇವೇಗೌಡರ ಸ್ಪರ್ಧೆ ವಿಚಾರ ನನಗೆ ಗೊತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಯಾರು ಬೆಗ್ಗರ್ಸ್ ಅಲ್ಲ. ಸಮನ್ವಯತೆಯಿಂದ ಕೂತು ಸ್ಥಾನ ಹಂಚಿಕೆ ಮಾಡಿಕೊಳ್ಳುತ್ತೇವೆ. ಸ್ಥಾನ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡುವುದಾಗಿ ಜೆಡಿಎಸ್ ನಾಯಕರು ಹೇಳಿದ್ದಾರೆ. ನಾನು ರೇವಣ್ಣ ಅವರ ಹೇಳಿಕೆಯನ್ನು ಗಮನಿಸಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv