– ಕ್ರಮ ಕೈಗೊಳ್ಳುವಂತೆ ಅಮಿತ್ ಶಾಗೆ ಕಾಂಗ್ರೆಸ್ ಪತ್ರ
ನವದೆಹಲಿ: ಟಿ.ವಿ ವಾಹಿನಿಯೊಂದರ ಚರ್ಚೆಯಲ್ಲಿ ಬಿಜೆಪಿಯ ಮಾಧ್ಯಮ ವಕ್ತಾರರೊಬ್ಬರು ‘ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು’ ಎಂಬ ಹೇಳಿಕೆಗೆ ಕಾಂಗ್ರೆಸ್ (Congress) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್, ರಾಹುಲ್ ಗಾಂಧಿಯ (Rahul Gandhi) ಎದೆಗೆ ಗುಂಡು ಹಾರಿಸಲಾಗುವುದು ಎಂದು ಕೇರಳ ಬಿಜೆಪಿ ವಕ್ತಾರ ಪಿಂಟು ಮಹಾದೇವ್ ಅವರು ಹೇಳಿದ್ದು, ಈ ಕುರಿತು ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಇದನ್ನೂ ಓದಿ: ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ಮಾಸ್ಟರ್ ಮೈಂಡ್ ನದೀಮ್ ಅರೆಸ್ಟ್
ಪಕ್ಷದ ತಳಹಂತದ ಪದಾಧಿಕಾರಿಯೊಬ್ಬರು ನೀಡಿರುವ ಕ್ಷುಲ್ಲಕ ಹೇಳಿಕೆ ಇದು ಎಂದು ಅಸಡ್ಡೆ ತೋರಬಾರದು. ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ನೀಡಿರುವ ದ್ವೇಷದ ಹೇಳಿಕೆ ಇದಾಗಿದೆ’ ಎಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್ | ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ ಚೈತನ್ಯಾನಂದ ಸರಸ್ವತಿ
‘ಬಿಜೆಪಿಯ ಮಾಧ್ಯಮ ವಕ್ತಾರರಾಗಿ ಟಿ.ವಿ. ವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸುವ ಎಬಿವಿಪಿಯ ಮಾಜಿ ಕಾರ್ಯಕರ್ತ ಪಿಂಟು ಮಹಾದೇವ್ ಹೇಳಿಕೆಯನ್ನು ನಿರ್ಲಕ್ಷ್ಯದಿಂದ ನೋಡಬಾರದು. ಅದು ಜೀವ ಬೆದರಿಕೆ’ ಎಂದಿರುವ ವೇಣುಗೋಪಾಲ್, ಆತನ ವಿರುದ್ಧ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹಿರಿಯ ರಂಗಕರ್ಮಿ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ನಿಧನ
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಸಾಂವಿಧಾನಿಕ ಚೌಕಟ್ಟಿನೊಳಗೆ ಪರಿಹರಿಸಿಕೊಳ್ಳಬೇಕು. ಆದರೆ ಬಿಜೆಪಿ ನಾಯಕರು ತಮ್ಮ ವಿರೋಧಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: RBI ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ