ನವದೆಹಲಿ: ಅನರ್ಹತೆ ಆದೇಶ ವಾಪಸ್ ಪಡೆದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ (Rahul Gandhi) ವಯನಾಡ್ ಕ್ಷೇತ್ರಕ್ಕೆ (Wayanad Constituecy) ಭೇಟಿ ನೀಡಲಿದ್ದಾರೆ. ಆಗಸ್ಟ್ 12 ಮತ್ತು 13 ರಂದು ರಾಹುಲ್ ಗಾಂಧಿ ತಮ್ಮ ಸಂಸತ್ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.
ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಹಿಂಪಡೆಯಲಾದ ಬಳಿಕ ಮೊದಲ ಬಾರಿಗೆ ಅವರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ.
Advertisement
Advertisement
ಆಗಸ್ಟ್ 12-13 ರಂದು ರಾಹುಲ್ ಗಾಂಧಿ ವಯನಾಡಿನಲ್ಲಿ ಇರಲಿದ್ದಾರೆ. ಪ್ರಜಾಪ್ರಭುತ್ವ ಗೆದ್ದಿರುವುದಕ್ಕೆ ವಯನಾಡಿನ ಜನರು ಹರ್ಷಿಸಿದ್ದಾರೆ. ತಮ್ಮ ಧ್ವನಿ ಸಂಸತ್ತಿಗೆ ಮರಳಿದೆ ಎಂದು ಖುಷಿಪಟ್ಟಿದ್ದಾರೆ ಎಂದು ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೌನ ವೃತದಲ್ಲಿರುವ ಮೋದಿ ಮಾತನಾಡಿಸಲು ಅವಿಶ್ವಾಸ ನಿರ್ಣಯ – ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಟೀಕೆ
Advertisement
Advertisement
ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಸೋಮವಾರ ಅವರು ಸಂಸತ್ ಭವನಕ್ಕೆ ತೆರಳಿ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದರು. ಅವರಿಗೆ ಇಂಡಿಯಾ ಒಕ್ಕೂಟದ ಸಂಸದರು ಭವ್ಯ ಸ್ವಾಗತ ಕೋರಿದರು. ಇದನ್ನೂ ಓದಿ: ರಾಹುಲ್ ಮದ್ವೆಯಾಗ್ತೀನಿ – ಒಂದು ಷರತ್ತು ಪಾಲಿಸಬೇಕು ಎಂದ ಶೆರ್ಲಿನ್ ಚೋಪ್ರಾ
Web Stories