ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ನಡೆಯುವ ಸಿದ್ದರಾಮೋತ್ಸವದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭಾಗವಹಿಸುವುದು ಖಚಿತವಾಗಿದೆ. ಆದರೆ ಕೊನೆಗಳಿಗೆಯಲ್ಲಿ ಬದಲಾವಣೆ ಆಗಬಹುದು ಎಂದು ರಾಹುಲ್ ಗಾಂಧಿ ಕಚೇರಿಯಿಂದ ಮಾಹಿತಿ ರವಾನೆಯಾಗಿದೆ.
ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವದಲ್ಲಿ ಎಐಸಿಸಿ ನಾಯಕರ ರಾಹುಲ್ ಗಾಂಧಿ ಭಾಗವಹಿಸುವುದು ಖಚಿತವಾಗಿದೆ. ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ರಾಹುಲ್ ಗಾಂಧಿ ಭಾಗವಹಿಸುತ್ತಾರೆ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಮಾಹಿತಿ ತಲುಪಿಸಲಾಗಿದೆ. ಇದನ್ನೂ ಓದಿ: ಗುತ್ತಿಗೆ, ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸುಧಾಕರ್
Advertisement
Advertisement
ಸಿದ್ದರಾಮೋತ್ಸವ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಆದರೂ ಕೊನೆಗಳಿಗೆಯಲ್ಲಿ ಬದಲಾವಣೆ ಆಗಬಹುದು. ಸ್ವತಃ ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಬಂದಿರುವ ಸಂದೇಶ. ಜುಲೈ 31 ರಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಲಾಗಿದೆ. ವಿಚಾರಣೆ ಆಗಸ್ಟ್ 3 ಕ್ಕೂ ಮುಂದುವರಿದರೆ ರಾಹುಲ್ ಗಾಂಧಿ ಸಿದ್ದರಾಮೋತ್ಸವಕ್ಕೆ ಬರಲು ಆಗಲ್ಲ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಮಾಹಿತಿ ರವಾನಿಸಲಾಗಿದೆ.
Advertisement
Advertisement
ಆಗಸ್ಟ್ 3 ರಂದು ಸೋನಿಯಾ ಗಾಂಧಿಯವರ ವಿಚಾರಣೆ ಇದ್ದರೆ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರಲು ಸಾಧ್ಯವಿಲ್ಲ. ಆಗಸ್ಟ್ 3 ರಂದು ರಾಹುಲ್ ಗಾಂಧಿಯವರನ್ನೇ ವಿಚಾರಣೆಗೆ ಕರೆದರೆ ಸಿದ್ದರಾಮೋತ್ಸವಕ್ಕೆ ಬರಲ್ಲ. ಈ ಬೆಳವಣಿಗೆ ನಡೆಯದಿದ್ದರೆ ಖಂಡಿತ ಆಗಸ್ಟ್ 3 ರಂದು ರಾಹುಲ್ ಗಾಂಧಿ ಅಮೃತ ಮಹೋತ್ಸವದಲ್ಲಿ ಭಾಗವಹಿಸುತ್ತಾರೆ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಸಂದೇಶ ತಲುಪಿದೆ. ಇದನ್ನೂ ಓದಿ: ಭ್ರಷ್ಟಾಚಾರದ ಇನ್ನೊಂದು ಮುಖವೇ ಕಾಂಗ್ರೆಸ್: ರೇಣುಕಾಚಾರ್ಯ