ನವದೆಹಲಿ: ಹುಟ್ಟು ಹಬ್ಬದ ಸಂಭ್ರಮದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕವಾಗಿ ವಿಶ್ ಮಾಡಿದ್ದಾರೆ.
ಹ್ಯಾಪಿ ಬರ್ತ ಡೇ ಮೋದಿಜಿ ಎಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ, ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ನರೇಂದ್ರ ಮೋದಿ ಅವರು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ರಾಹುಲ್ ಗಾಂಧಿ ಸೇರಿಂದತೆ ಹಲವು ಗಣ್ಯರು ಮೋದಿ ಅವರಿಗೆ ವಿಶ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸ್ವೀಕರಿಸಿದ ಉಡುಗೊರೆ- ಸ್ಮರಣಿಕೆಗಳು ಸೆ.17ರಿಂದ ಇ-ಹರಾಜು
Happy birthday, Modi ji.
— Rahul Gandhi (@RahulGandhi) September 17, 2021
ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.
1950ರಲ್ಲಿ ಗುಜರಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಿಸಿದರು. ನಂತರ ಆರ್ಎಸ್ಎಸ್ ಸೇರಿ ಹಿಂದುತ್ವ ಪ್ರತಿಪಾದಕರಾಗಿದ್ದರು. ನಂತರ ಗುಜರಾತ್ನ ಮುಖ್ಯಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.