ನವದೆಹಲಿ: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಹಾಗೂ ಸೋಲನುಭವಿಸಿದ ಕಮಲಾ ಹ್ಯಾರಿಸ್ ಇಬ್ಬರಿಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಪತ್ರ ಬರೆದಿದ್ದಾರೆ.
ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಅಮೆರಿಕಾದ ಜನರು ನಿಮ್ಮ ಮೇಲೆ ನಂಬಿಕೆ ಇರಿಸಿದ್ದಾರೆ. ಭಾರತ ಮತ್ತು ಅಮೆರಿಕ ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ಬದ್ದತೆ ಇಟ್ಟುಕೊಂಡಿರುವ ದೇಶಗಳು. ನಮ್ಮ ರಾಷ್ಟ್ರಗಳು ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ಆಳಗೊಳಿಸುತ್ತವೆ ಎಂಬ ವಿಶ್ವಾಸ ನಮಗಿದೆ. ಭಾರತೀಯರು ಮತ್ತು ಅಮೆರಿಕನ್ನರಿಬ್ಬರಿಗೂ ಮಾರ್ಗಗಳು ಮತ್ತು ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದು ಟ್ರಂಪ್‌ಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಎಲೆಕ್ಷನ್ ವಿಕ್ಟರಿ ಫೋಟೋ ಸೆಷನ್‌ನಲ್ಲಿ ಕಾಣಿಸಿಕೊಂಡ ಮಸ್ಕ್ – ಟ್ರಂಪ್ ಪತ್ನಿ ಮೆಲಾನಿಯಾ ಮಿಸ್ಸಿಂಗ್
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ಕಮಲಾ ಹ್ಯಾರಿಸ್‌ಗೂ ಪತ್ರ ಬರೆದಿದ್ದು, ನಿಮ್ಮ ಉತ್ಸಾಹಭರಿತ ಅಧ್ಯಕ್ಷೀಯ ಪ್ರಚಾರಕ್ಕಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ನಿಮ್ಮ ಒಗ್ಗೂಡಿಸುವ ಭರವಸೆಯ ಸಂದೇಶವು ಅನೇಕರನ್ನು ಪ್ರೇರೇಪಿಸುತ್ತದೆ. ಜೋ ಬೈಡೆನ್ ಆಡಳಿತದಲ್ಲಿ ಭಾರತ ಮತ್ತು ಅಮೆರಿಕ ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಆಳವಾದ ಸಹಕಾರವನ್ನು ಹೊಂದಿವೆ. ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ನಮ್ಮ ಹಂಚಿಕೆಯ ಬದ್ಧತೆಯು ನಮ್ಮ ಸ್ನೇಹಕ್ಕೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತದೆ ಎಂದು ಧೈರ್ಯ ತುಂಬಿದ್ದಾರೆ.
ಉಪಾಧ್ಯಕ್ಷರಾಗಿ ಜನರನ್ನು ಒಟ್ಟುಗೂಡಿಸುವ ಮತ್ತು ಸಾಮಾನ್ಯ ನೆಲೆಯನ್ನು ಕಂಡುಕೊಳ್ಳುವ ನಿಮ್ಮ ಸಂಕಲ್ಪವನ್ನು ನೆನಪಿಸಿಕೊಳ್ಳಲಾಗುತ್ತದೆ. ನಿಮ್ಮ ಮುಂದಿನ ಪ್ರಯತ್ನಗಳಲ್ಲಿ ನಾನು ನಿಮಗೆ ಶುಭ ಹಾರೈಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಬ್ರೇಕ್ ಹಾಕಲು ಮುಂದಾದ ಟ್ರಂಪ್