ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೆಲಿಕಾಪ್ಟರ್ (Helicopter) ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
Advertisement
ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಗದ್ದಲದ ನಡುವೆ ರಾಹುಲ್ ಗಾಂಧಿ ಅವರ ಬ್ಯಾಗ್ ಪರಿಶೀಲಿಸಿದ್ದಾರೆ. ಈ ಕುರಿತ ವೀಡಿಯೋವೊಂದು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ತಪಾಸಣೆ ನಡೆಸಿದ ವೀಡಿಯೋನಲ್ಲಿ ಚುನಾವಣಾ ಅಧಿಕಾರಿಗಳ ಗುಂಪೊಂದು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸುತ್ತಿರುವುದನ್ನು ತೋರಿಸುತ್ತದೆ. ಇದನ್ನೂ ಓದಿ: ಸಂವಿಧಾನ ಭಾರತದ ಡಿಎನ್‌ಎ; ಸಂವಿಧಾನದ ಖಾಲಿ ಪ್ರತಿ ಟೀಕೆಗೆ ರಾಹುಲ್ ಗಾಂಧಿ ಪ್ರತ್ಯುತ್ತರ
Advertisement
Advertisement
ಒಂದು ದಿನದ ಹಿಂದೆಯಷ್ಟೇ ಜಾರ್ಖಂಡ್‌ನ ಗೊಡ್ಡಾದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್‌ಗೆ ಏರ್ ಟ್ರಾಫಿಕ್ ಕಂಟ್ರೋಲ್ (Air Traffic Control) ತಡವಾಗಿ ಅನುಮತಿ ನೀಡಿದ ಪರಿಣಾಮ ರಾಹುಲ್ ಗಾಂಧಿ ಅವರ ಪ್ರಯಾಣ 45 ನಿಮಿಷಗಳ ಕಾಲ ವಿಳಂಬವಾಗಿತ್ತು. ರಾಜ್ಯದ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಪ್ರಚಾರಕ್ಕೆ ಅವರು ತೆರಳುತ್ತಿದ್ದ ವೇಳೆ ಅವರ ಹೆಲಿಕಾಪ್ಟರ್ ಟೇಕ್ ಆಫ್‌ಗೆ ತಡವಾಗಿ ಅನುಮತಿ ನೀಡಲಾಗಿತ್ತು. ಇದರಿಂದ ಸುಮಾರು 45 ನಿಮಿಷಗಳ ಕಾಲ ರಾಹುಲ್ ಹೆಲಿಕಾಪ್ಟರ್‌ನಲ್ಲೇ ಕಾದು ಕುಳಿತಿದ್ದರು.
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ (Congress), ರಾಹುಲ್ ಗಾಂಧಿ ಪ್ರಚಾರಕ್ಕೆ ಸಮಸ್ಯೆ ಉಂಟು ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗಿದೆ. ಗೊಡ್ಡಾದಿಂದ ಸುಮಾರು 150 ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಚಕೈಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ರ‍್ಯಾಲಿ ಇತ್ತು. ಅವರ ಕಾರ್ಯಕ್ರಮಕ್ಕೆ ಎಟಿಸಿ ಆದ್ಯತೆ ನೀಡಿದೆ ಎಂದು ಆರೋಪಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆದಿದೆ. ಇದನ್ನೂ ಓದಿ: ಮಣಿಪುರ-ಅಸ್ಸಾಂ ಗಡಿಯ ನದಿಯಲ್ಲಿ ಮಹಿಳೆ ಸೇರಿ 3 ಮೃತದೇಹಗಳು ಪತ್ತೆ
ಕಳೆದ 6 ದಿನಗಳ ಹಿಂದೆಯಷ್ಟೇ ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ಮೊದಲ ಬಾರಿಗೆ ವೀಡಿಯೊವನ್ನು ಹಂಚಿಕೊಂಡಿದ್ದರು. ಉದ್ಧವ್ ಠಾಕ್ರೆ ಅವರ ಬ್ಯಾಗ್ ಪರಿಶೀಲಿಸಿದ ಬಳಿಕ ವಿಡಿಯೋ ಹಂಚಿಕೊಂಡು ಮೋದಿ ಮತ್ತು ಬಿಜೆಪಿ ನಾಯಕರಿಗೆ ಇದೇ ರೀತಿಯ ತಪಾಸಣೆಗಳನ್ನು ನಡೆಸಲಾಗುತ್ತದೆಯೇ? ಪ್ರಶ್ನೆ ಮಾಡಿದ್ದರು. ಇದಾದ ನಂತರ ಬ್ಯಾಗ್ ತಪಾಸಣೆಯ ಸರಣಿ ಪರಿಶೀಲನೆ ನಡೆದಿದೆ. ಶುಕ್ರವಾರವಷ್ಟೇ ಅಮಿತ್ ಶಾ ಅವರ ಹೆಲಿಕಾಪ್ಟರ್ ಅನ್ನು ತಪಾಸಣೆ ನಡೆಸಲಾಗಿತ್ತು. ಇದನ್ನೂ ಓದಿ: ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ನಡೆಸಿದ ಖ್ಯಾತ ಗಾಯಕ ಸಂಜಯ್ ಚಕ್ರವರ್ತಿ ಅರೆಸ್ಟ್