ಭೋಪಾಲ್: ಕಾಂಗ್ರೆಸ್‍ನ (Congress) ಭಾರತ್ ಜೋಡೋ ಯಾತ್ರೆ (Bharat Jodo Yatra) ಮಧ್ಯಪ್ರದೇಶಕ್ಕೆ ತಲುಪಿದ್ದು, ಸಂಸದ ರಾಹುಲ್ ಗಾಂಧಿ (Rahul Gandhi) ಸಹೋದರಿ ಪ್ರಿಯಾಂಕಾ ಗಾಂಧಿ (Priyanka Gandhi) ಜೊತೆ ಸೇರಿ ನರ್ಮದಾ (Narmada) ನದಿಗೆ (River) ಆರತಿ (Aarti) ಬೆಳಗಿದ್ದಾರೆ.
Advertisement
ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಬ್ರಹ್ಮಪುರಿ ಘಾಟ್‍ನಲ್ಲಿರುವ ನರ್ಮದಾ ನದಿಗೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಆರತಿ ಬೆಳಗಿ ಬಳಿಕ ಬೆಟ್ಟದ ಮೇಲಿರುವ ಪ್ರಸಿದ್ಧ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇವರಿಗೆ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಅವರ ಮಗ ರೈಹಾನ್ ವಾದ್ರಾ ಸಾಥ್ ನೀಡಿದರು. ಇದನ್ನೂ ಓದಿ: ಕುಕ್ಕೆಯ ಬಳಿಕ ಬೆಂಗಳೂರಿಗೆ ತಟ್ಟಿದ ಧರ್ಮ ದಂಗಲ್
Advertisement
Advertisement
ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಭಾರತ್ ಜೋಡೋ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದು, ದೇಶದಲ್ಲಿ ಶಾಂತಿ ಮತ್ತು ಏಕತೆ ನೆಲೆಸಲಿ. ತಾಯಿ ನರ್ಮದಾ ಎಲ್ಲರಿಗೂ ಶುಭವನ್ನು ತರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹಲವು ಫೋಟೋಗಳನ್ನು ಪೋಸ್ಟ್ ಮಾಡಿದೆ. ಇದನ್ನೂ ಓದಿ: ಈಗಲೂ ಮೋದಿ ನಂ.1 ಜನಪ್ರಿಯ ನಾಯಕ
Advertisement
LIVE: Narmada Aarti | #BharatJodoYatra | Madhya Pradesh https://t.co/jK2T6LAsOa
— Bharat Jodo (@bharatjodo) November 25, 2022
ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ಕಳೆದೆರಡು ದಿನಗಳಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ನಿನ್ನೆ ರಾಹುಲ್ ಗಾಂಧಿ ಜೊತೆ ಬಾಕ್ಸರ್ ವಿಜೇಂದರ್ ಸಿಂಗ್ (Vijender Singh) ಕೂಡ ಪಾಲ್ಗೊಂಡಿದ್ದರು. ಇದೀಗ ಯಾತ್ರೆ ಮಧ್ಯಪ್ರದೇಶದಲ್ಲಿ ಸಾಗುತ್ತಿದ್ದು, ಮುಂದೆ ರಾಜಸ್ಥಾನಕ್ಕೆ ಪ್ರವೇಶ ಮಾಡಲಿದೆ.