ಚಾಮರಾಜನಗರ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ(Bharat Jodo Yatra) ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಅಂತರರಾಜ್ಯ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಮಡಲಾಗಿದೆ. ಚಾಮರಾಜನಗರ(Chamarajanagar) ಡಿಸಿ ಚಾರುಲತಾ ಸೋಮಲ್ ಅವರು ಮಾರ್ಗ ಬದಲಾಯಿಸಿ ಆದೇಶ ಹೊರಡಿಸಿದ್ದಾರೆ.
ಸಂಚಾರ ಹೇಗೆ?
ಕೇರಳದ ಸುಲ್ತಾನ್ ಬತ್ತೇರಿಯಿಂದ ಮೂಲೆಹೊಳೆ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು ಗುಂಡ್ಲುಪೇಟೆಯ ಕಗ್ಗಳದಹುಂಡಿ ಗ್ರಾಮದ ಕ್ರಾಸ್ ಬಳಿಯಿಂದ ಚೆನ್ನಮಲ್ಲಿಪುರ-ಹೊಂಗಹಳ್ಳಿ-ಮೂಕಹಳ್ಳಿ-ಮುಂಟಿಪುರ-ಬರಗಿ-ದೇಶಿಪುರ-ಆಲತ್ತೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕು. ಇದನ್ನೂ ಓದಿ: ಮುಖೇಶ್ ಅಂಬಾನಿಗೆ Z+ ಭದ್ರತೆ
Advertisement
ಕೇರಳದ ಸುಲ್ತಾನ್ ಬತ್ತೇರಿಯಿಂದ ಮೂಲೆಹೊಳೆ ಮಾರ್ಗವಾಗಿ ಊಟಿಗೆ ತೆರಳುವ ವಾಹನಗಳು ಗುಂಡ್ಲುಪೇಟೆಯ ಕಗ್ಗಳದಹುಂಡಿ ಕ್ರಾಸ್ ಬಳಿಯಿಂದ ಬೇರಂಬಾಡಿ-ಬೀಚನಹಳ್ಳಿ-ಲಕ್ಕಿಪುರ-ದೇವರಹಳ್ಳಿ-ಹಂಗಳ ಮಾರ್ಗವಾಗಿ ಊಟಿಗೆ ತೆರಳಬೇಕು.
Advertisement
ಭಾರತ ಐಕ್ಯತಾ ಯಾತ್ರೆಯು ನಾಳೆಯಿಂದ ಕರ್ನಾಟಕದಲ್ಲಿ ಆರಂಭವಾಗಲಿದ್ದು ಎಐಸಿಸಿಯಿಂದ ಅನುಮೋದನೆಗೊಂಡ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 14 ರ ವರೆಗಿನ ಯಾತ್ರೆಯ ಅಧಿಕೃತ ವೇಳಾಪಟ್ಟಿ ಹಾಗು ಮಾರ್ಗ ನಕ್ಷೆ ಹೀಗಿದೆ.#Bharataikyatayatre pic.twitter.com/WmPDiuk44c
— Karnataka Congress (@INCKarnataka) September 29, 2022
Advertisement
ಊಟಿ ಕಡೆಯಿಂದ ಮೈಸೂರಿಗೆ ಬರುವ ವಾಹನಗಳು ಹಂಗಳ-ಹಂಗಳಪುರ-ಶಿವಪುರ-ಕೋಡಹಳ್ಳಿ-ಅಣ್ಣೂರು ಕೇರಿ ಮೂಲಕ ಗುಂಡ್ಲುಪೇಟೆ ಕೋಡಹಳ್ಳಿ ಸರ್ಕಲ್ ಬಳಿ ಚಾಮರಾಜನಗರ ರಸ್ತೆ ಮೂಲಕ ಮೈಸೂರಿಗೆ ತೆರಳಬೇಕು.
Advertisement
ಇಂದಿನ ಕಾರ್ಯಕ್ರಮ ಏನು?
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಬಳಿ ಕಾಂಗ್ರೆಸ್(Congress) ರಾಜ್ಯ ನಾಯಕರು ರಾಹುಲ್ ಗಾಂಧಿಗೆ ಸ್ವಾಗತ ಕೋರುತ್ತಾರೆ. ಬಳಿಕ ವೇದಿಕೆ ಕಾರ್ಯಕ್ರಮ ಮುಗಿಸಿ ರಾಹುಲ್ ಗಾಂಧಿ ಅಂಬೇಡ್ಕರ್ ಭವನದಿಂದ ವೀರನಪುರ ಗೇಟ್‌ವರೆಗೂ 4 ಕಿಮೀ ಪಾದಯಾತ್ರೆ ನಡೆಸಲಿದ್ದಾರೆ.
Thank you Kerala!
We are forever indebted to you ♥️#BharatJodoYatra pic.twitter.com/lkZrbxeUdS
— Bharat Jodo (@bharatjodo) September 29, 2022
ಗುಂಡ್ಲುಪೇಟೆ ಅಂಬೇಡ್ಕರ್ ಭವನದ ಮುಂಭಾಗ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವೇದಿಕೆಯಲ್ಲಿ ಕುಳಿತುಕೊಳ್ಳಲು 250 ಮಂದಿಗೆ ಅವಕಾಶ ಕಲ್ಪಿಸಲಾಗಿದೆ. 30 ಸಾವಿರಕ್ಕೂ ಹೆಚ್ಚು ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.