ನವದೆಹಲಿ: ಇಲ್ಲಿನ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ (Anand Vidhar Railway Station) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು (Rahul Gandhi) ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು.
EXCLUSIVE:
Rahul Gandhi lifts the luggage in the dress of a coolie at Anand Vihar station.
Last month, these coolies demanded to meet Rahul Gandhi.
In just 36 days, their wish came true just with a viral video.
Rahul Gandhi is hitting BJP on their propaganda machinery by… pic.twitter.com/8LnbQ6uIMU
— Amock (@Politics_2022_) September 21, 2023
Advertisement
ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ ವೀಡಿಯೋ ಹಾಗೂ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ: ಗಣಪತಿ ವಿಸರ್ಜನೆಯಲ್ಲಿ ಪೊಲೀಸರು ಬ್ಯುಸಿ – 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ
Advertisement
Advertisement
ವಯನಾಡು ಸಂಸದರೂ ಆಗಿರುವ ರಾಹುಲ್ ಗಾಂಧಿಯವರು ಟ್ರೋಲಿ ಬ್ಯಾಗ್ ಅನ್ನು ತಲೆ ಮೇಲೆ ಹೊತ್ತುಕೊಂಡು ಹೋಗುತ್ತಿರುವುದನ್ನು ಗಮನಿಸಬಹುದು. ಈ ವೇಳೆ ಅಲ್ಲಿನ ಕಾರ್ಮಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಳಿಕ ರೈಲ್ವೇ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರು ಕಾರ್ಮಿಕರ ಸಮಸ್ಯೆಗಳನ್ನು ಆಲಿಸುವುದನ್ನು ಕೂಡ ನಾವು ವೀಡಿಯೋದಲ್ಲಿ ಗಮನಿಸಬಹುದಾಗಿದೆ.
Advertisement
ಈ ಸಂಬಂಧ ಕಾಂಗ್ರೆಸ್ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ರಾಹುಲ್ ಗಾಂಧಿಯವರು ಇಂದು ಆನಂದ್ ವಿಹಾರ್ ರೈಲೇ ನಿಲ್ದಾಣದಲ್ಲಿ ಇಂದು ಕಾರ್ಮಿಕ ಸ್ನೇಹಿತರನ್ನು ಭೇಟಿಯಾಗಿದ್ದಾರೆ. ಅಲ್ಲಿನ ಸ್ಥಿತಿಗತಿ ಕುರಿತು ಕಾರ್ಮಿಕ ಸ್ನೇಹಿತರೊಬ್ಬರು ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ಅವರನ್ನು ರಾಹುಲ್ ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು. ಈ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
Web Stories