ಲಕ್ನೋ: ಉತ್ತರಪ್ರದೇಶದ ಲಕ್ನೋದಲ್ಲಿರುವ ಸಮಾಜವಾದಿ ಪಕ್ಷದ ಕಚೇರಿಯ ಎದುರು ಹಾಕಲಾಗಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯ ದೊಡ್ಡ ಕಟೌಟನ್ನು ರಾತ್ರೋ ರಾತ್ರಿ ತೆಗೆದು ಹಾಕಲಾಗಿದೆ. ರಾಹುಲ್ ಗಾಂಧಿ ಕಟೌಟ್ ಬದಲು ಅಖಿಲೇಶ್ ಯಾದವ್ ಅವರ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಕಟೌಟ್ ಹಾಕಲಾಗಿದೆ.
Advertisement
ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಉತ್ತರಪ್ರದೇಶದಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಲಾಗಿದೆ. ಆದ್ರೆ ಈ ಬಗ್ಗೆ ಶುಕ್ರವಾರದಂದು ಪ್ರತಿಕ್ರಿಯೆ ನೀಡಿದ್ದ ರಾಹುಲ್ ಗಾಂಧಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿಕೂಟವೇ ಗೆಲ್ಲುತ್ತದೆ. ಈ ಹಿಂದೆ ಬಿಹಾರದ ಚುನಾವಣೋತ್ತರ ಸಮೀಕ್ಷೆಗಳು ತಾಪ್ಪಾಗಿದ್ದವು ಎಂದು ಹೇಳಿದ್ದರು.
Advertisement
ಆದರೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾದ ನಂತರ ಅಖಿಲೇಶ್ ಯಾದವ್, ಬಹುಜನ ಸಮಾಜವಾದಿ ಪಕ್ಷದ ಮಾಯಾವತಿ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಹೇಳಿದ್ದಾರೆ. ಇದಕ್ಕೆ ಮಾಯಾವತಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.