ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದು ಸಂವಿಧಾನಬಾಹಿರ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (Nationalist Congress Party) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದು ಸಂವಿಧಾನಬಾಹಿರ. ಪ್ರಜಾಪ್ರಭುತ್ವ (Democracy) ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಉರಿಗೌಡ, ನಂಜೇಗೌಡ ಹೆಸರುಗಳನ್ನು ನಾನು ಸೃಷ್ಟಿ ಮಾಡಿಲ್ಲ : ಅಡ್ಡಂಡ ಕಾರ್ಯಪ್ಪ
Advertisement
Advertisement
ಕೇರಳದ ವಯನಾಡ್ (Wayanad) ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್ ಗಾಂಧಿ ಅವರನ್ನು ಗುಜರಾತ್‍ನ ಸೂರತ್ (Surat) ನ್ಯಾಯಾಲಯವು `ಮೋದಿ’ ಉಪನಾಮದ (Modi surname) ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ (Defamation) ಮೊಕದ್ದಮೆಯಲ್ಲಿ ಗುರುವಾರ ಎರಡು ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ನಂತರ ಅವರ ಸದಸ್ಯತ್ವವನ್ನು ಶುಕ್ರವಾರ ಅನರ್ಹಗೊಳಿಸಲಾಗಿತ್ತು.
Advertisement
ನ್ಯಾಯಾಲಯವು ಅವರಿಗೆ ಜಾಮೀನು ನೀಡಿ, ಮೇಲಿನ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು. 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿತ್ತು.
Advertisement
ಇದೇ ರೀತಿ, ಎನ್‍ಸಿಪಿ ಸಂಸದ ಲಕ್ಷದ್ವೀಪ್ ಮಹಮ್ಮದ್ ಫೈಜಲ್ ( Lakshadweep Mohammed Faizal) ಅವರನ್ನು ಕೊಲೆ ಪ್ರಯತ್ನ ಪ್ರಕರಣದಲ್ಲಿ ಅನರ್ಹಗೊಳಿಸಲಾಗಿತ್ತು. ಆದರೆ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿತ್ತು. ಈಗ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?