ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರನ್ನು (Rahul Gandhi) ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
Rahul Gandhi set to lose the perks and privileges of a Member of Parliament, now that he has been disqualified. pic.twitter.com/SysUvHArQq
— Smita Prakash (@smitaprakash) March 24, 2023
Advertisement
ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿ ಸ್ಥಾನ ಕಳೆದುಕೊಂಡಿರುವುದು ಇದೇ ಮೊದಲೇನಲ್ಲ. ಭಾರತದ ರಾಜಕೀಯ ಇತಿಹಾಸದಲ್ಲಿ ಅನೇಕ ಶಾಸಕರು, ಸಂಸದರೂ ಮಾನನಷ್ಟ ಮೊಕದ್ದಮೆಗೆ ಒಳಗಾಗಿ ತಮ್ಮ ಸ್ಥಾನ ಕಳೆದುಕೊಂಡಿದ್ದಾರೆ. ಕಾಕತಾಳೀಯವೆಂಬಂತೆ ಈ ಸಾಲಿನಲ್ಲಿ ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ (Indira Gandhi) ಅವರೂ ಸೇರಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
Advertisement
ಹೌದು. 1975ರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಜಗಮೋಹನ್ ಲಾಲ್ ಸಿನ್ಹಾ ಇಂದಿರಾ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ದೇಶವೇ ತಿರುಗಿ ನೋಡುವಂತಹ ತೀರ್ಪು ನೀಡಿದ್ದರು. ಈ ತೀರ್ಪು ತುರ್ತು ಪರಿಸ್ಥಿತಿ ಘೋಷಣೆಗೂ ಕಾರಣವಾಗಿತ್ತು ಎಂದು ಹೇಳಲಾಗಿದೆ.
Advertisement
Advertisement
ಸಿನ್ಹಾ ಅವರು, 1971ರ ಚುನಾವಣಾ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯ ಅವರನ್ನ ದೋಷಿ ಎಂದು ಘೋಷಿಸಿದ್ದರು. ಅದರಂತೆ ಜನಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ 6 ವರ್ಷಗಳ ಕಾಲ ಯಾವುದೇ ಚುನಾಯಿತ ಹುದ್ದೆಯಲ್ಲಿ ಮುಂದುವರಿಯದಂತೆ ತಡೆ ಹಾಕಿದ್ದರು. ಇದನ್ನೂ ಓದಿ: ಅಂದು ಸುಗ್ರೀವಾಜ್ಞೆ ಹರಿದು ಎಸೆಯದೇ ಇದ್ದಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ!
ಇದೀಗ 2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದ್ದರು. ಇದರ ಬೆನ್ನಲ್ಲೇ, ಶುಕ್ರವಾರ ರಾಹುಲ್ ಅವರನ್ನ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಜನಪ್ರತಿನಿಧಿಗಳ ಕಾಯ್ದೆ ಏನು ಹೇಳುತ್ತದೆ?
ಜನಪ್ರತಿನಿಧಿಗಳ ಕಾಯ್ದೆಯಂತೆ ಶಾಸಕರು/ ಸಂಸದರು ಎರಡು ನಿದರ್ಶನಗಳಲ್ಲಿ ತಮ್ಮ ಸ್ಥಾನದಿಂದ ಅನರ್ಹರಾಗಬಹುದು. ಮೊದಲು ಸೆಕ್ಷನ್ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ ಮತ್ತು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಥವಾ ಸೆಕ್ಷನ್ 171E (ಲಂಚ ತೆಗೆದುಕೊಳ್ಳುವುದು)ನಂತಹ ಪ್ರಕರಣ ಅಥವಾ ಸೆಕ್ಷನ್ 171F (ಚುನಾವಣೆಯಲ್ಲಿ ಅನಗತ್ಯ ಪ್ರಭಾವದ) ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ ತಮ್ಮ ಸ್ಥಾನವನ್ನು ಸಂಸದರು ಕಳೆದುಕೊಳ್ಳಲಿದ್ದಾರೆ.
ಶಾಸಕರು ಅಥವಾ ಸಂಸದರು ಯಾವುದೇ ಇತರ ಅಪರಾಧ ಪ್ರಕರಣಗಳಲ್ಲಿ ಎರಡು ವರ್ಷ ಅಥವಾ ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾಗಿದ್ದಾರೆ ಅವರನ್ನು ಶಾಸಕ/ ಸಂಸದ ಸ್ಥಾನದಿಂದ ಅನರ್ಹಗೊಳಿಸಬಹುದು. ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಕಾರಣ ಈಗ ಈ ಕಾಯ್ದೆಯ ಅಡಿ ಅನರ್ಹ ಮಾಡಲಾಗಿದೆ.