– ಬಿಜೆಪಿ ಗೆದ್ದು ಸಂವಿಧಾನ ಬದಲಾಯಿಸಿದ್ರೆ ದೇಶವೇ ಹೊತ್ತಿ ಉರಿಯುತ್ತದೆ ಎಂದ ಸಂಸದ
ನವದೆಹಲಿ: ಮ್ಯಾಚ್ ಫಿಕ್ಸಿಂಗ್ (Match Fixing) ಇಲ್ಲದೇ ಬಿಜೆಪಿ ʻ400 ಪಾರ್ʼ ಘೋಷಣೆ ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ ಕೆಲಸ ಮಾಡುತ್ತಿಲ್ಲ. ಅವರ ಜೊತೆಗೆ ಕೆಲವು ಉದ್ಯಮಿಗಳೂ ಸೇರಿಕೊಂಡಿದ್ದಾರೆ ಎಂದು ಸಂಸದ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ED ಬಂಧನ ಖಂಡಿಸಿ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ I.N.D.I.A. ಒಕ್ಕೂಟದ ʻಪ್ರಜಾಪ್ರಭುತ್ವ ಉಳಿಸಿʼ ಪ್ರತಿಭಟನಾ ರ‍್ಯಾಲಿಯನ್ನು ದ್ದೇಶಿಸಿ ಅವರು, ಬಿಜೆಪಿ ಗೆದ್ದು ಸಂವಿಧಾನವನ್ನ ಬದಲಾಯಿಸಿದ್ರೆ, ದೇಶವೇ ಹೊತ್ತಿ ಉರಿಯುತ್ತದೆ. ಸಂವಿಧಾನ ಹೋದರೆ ಬಡವರ ಹಕ್ಕುಗಳು ಮತ್ತು ಮೀಸಲಾತಿಯೂ ಹೋಗುತ್ತದೆ ಎಂದು ಆತಂಕಪಟ್ಟಿದ್ದಾರೆ.
Advertisement
Advertisement
ಸಂವಿಧಾನ ಬದಲಾದ ದಿನವೇ ದೇಶ ಒಡೆಯುತ್ತದೆ:
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಬಿಜೆಪಿ ತನ್ನ ಪ್ರಯತ್ನಗಳಲ್ಲಿ ಯಶಸ್ವಿಯಾದರೆ, ದೇಶದ ಸಂವಿಧಾನವನ್ನು ಬದಲಾಯಿಸುತ್ತದೆ. ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಬಡವರ ಹಣವನ್ನು ಕಸಿದುಕೊಳ್ಳುತ್ತಾರೆ, ಸಂವಿಧಾನ ಬದಲಾದ ದಿನವೇ ದೇಶ ಒಡೆದು ಹೋಗುತ್ತದೆ. ಅವರು ಸಂವಿಧಾನ ಬದಲಾಯಿಸುತ್ತೇವೆ ಎಂದು ಸುಮ್ಮನೆ ಹೇಳಿಲ್ಲ. ಜನರ ಪ್ರತಿಕ್ರಿಯೆಯನ್ನ ಪರೀಕ್ಷೆ ಮಾಡ್ತಿದ್ದಾರೆ. ಆದ್ದರಿಂದ ಇದು ಸಾಮಾನ್ಯ ಚುನಾವಣೆಯಲ್ಲ, ಭಾರತ ಮತ್ತು ಸಂವಿಧಾನ ಉಳಿಸುವ ಚುನಾವಣೆ, ಬಡವರ, ರೈತರ ಹಕ್ಕು ರಕ್ಷಿಸುವ ಚುನಾವಣೆ. ಇಂತಹ ಚುನಾವಣೆಯನ್ನು ಮ್ಯಾಚ್ ಫಿಕ್ಸಿಂಗ್ ಮಾಡಲಾಗುತ್ತಿದೆ. ವಿಪಕ್ಷಗಳು ಚುನಾವಣೆ ಎದುರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ. ನ್ಯಾಯಂಗದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
Advertisement
Advertisement
ಮ್ಯಾಚ್ ಫಿಕ್ಸಿಂಗ್ ಆಗದಿದ್ದರೆ 180 ಸ್ಥಾನ ದಾಟಲ್ಲ:
ಕ್ರಿಕೆಟ್‌ನಲ್ಲಿ ಅಂಪೈರ್‌ಗಳು ಮತ್ತು ನಾಯಕನ ಮೇಲೆ ಒತ್ತಡ ಹೇರಿ, ಆಟಗಾರರನ್ನು ಖರೀದಿಸಿ ಪಂದ್ಯ ಗೆದ್ದರೆ ಮ್ಯಾಚ್ ಫಿಕ್ಸಿಂಗ್ ಎನ್ನುತ್ತಾರೆ. ನಮ್ಮ ಮುಂದೆ ಲೋಕಸಭೆ ಚುನಾವಣೆ ಇದೆ. ಅಂಪೈರ್‌ಗಳನ್ನು ಆಯ್ಕೆ ಮಾಡಿದವರು ಯಾರು? ಪಂದ್ಯ ಆರಂಭವಾಗುವ ಮುನ್ನ ಇಬ್ಬರು ಆಟಗಾರರನ್ನು (ಇಬ್ಬರು ಸಿಎಂ) ಬಂಧಿಸಲಾಗಿದೆ. ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಮ್ಯಾಚ್ ಫಿಕ್ಸಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಇವಿಎಂಗಳು, ಮ್ಯಾಚ್ ಫಿಕ್ಸಿಂಗ್, ವಿರೋಧ ಪಕ್ಷದ ನಾಯಕರ ಮೇಲೆ ಒತ್ತಡ ತರದಿದ್ದರೆ, ಮಾಧ್ಯಮಗಳನ್ನು ಖರೀದಿಸದಿದ್ದರೆ ಅವರು 180 ಸ್ಥಾನಗಳನ್ನೂ ದಾಟಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಅತಿದೊಡ್ಡ ವಿರೋಧ ಪಕ್ಷವಾಗಿದೆ. ಆದ್ರೆ ಪಕ್ಷದ ಎಲ್ಲಾ ಖಾತೆಗಳನ್ನ ಸ್ಥಗಿತಗೊಳಿಸಲಾಗಿದೆ. ಇಬ್ಬರು ಸಿಎಂ ಗಳನ್ನ ಬಂಧಿಸಲಾಗಿದೆ. ಇದು ಯಾವ ರೀತಿಯ ಚುನಾವಣೆ? ಎಂದು ಪ್ರಶ್ನಿಸಿದ್ದಾರೆ.