ನವದೆಹಲಿ: 2024ರ ಲೋಕಸಭಾ ಚುನಾವಣೆ ಸಮೀಸುತ್ತಿದ್ದರು, ಮುಂದಿನ ಕಾಂಗ್ರೆಸ್ ಮುಖ್ಯಸ್ಥರು ಯಾರು ಎನ್ನುವುದು ಇನ್ನೂ ನಿರ್ಧಾರವಾಗುತ್ತಿಲ್ಲ. ಅಷ್ಟೇ ಅಲ್ಲದೇ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರಾಗಿ ಎಂದು ಪಕ್ಷದ ಸದಸ್ಯರು ಹಲವು ಬಾರಿ ಕೇಳಿಕೊಂಡರೂ ಅದಕ್ಕೆ ಅವರೂ ಈವರೆಗೂ ಒಪ್ಪಿಗೆ ಸೂಚಿಸಿಲ್ಲ ಎಂದು ಮೂಲಗಳು ತಿಳಿಸಿವೆ.
2019ರ ಸಾರ್ವತ್ರಿಕ ಚುನಾವಣೆಯ ಸೋಲಿನ ನಂತರ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಪಕ್ಷದ ಸದಸ್ಯರು ಮತ್ತೆ ಅಧ್ಯಕ್ಷರಾಗುವಂತೆ ಒಪ್ಪಿಸಲು ಎಷ್ಟೇ ಪ್ರಯತ್ನಿಸಿದರೂ, ಆ ಎಲ್ಲಾ ಮನವಿಗಳನ್ನು ತಿರಸ್ಕರಿಸಿದ್ದರು.
Advertisement
Advertisement
ಇದೀಗ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣದಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ಮರಳಲು ನಿರಾಕರಿಸಿದ್ದಾರೆ. ಕಾಂಗ್ರೆಸ್‍ನ ಹೆಚ್ಚಿನ ಸದಸ್ಯರು ಗಾಂಧಿ ಕುಟುಂಬದವರೇ ಪುನಃ ಅಧ್ಯಕ್ಷರಾಗಲು ಬಯಸುತ್ತಿದ್ದಾರೆ. ಇದರಿಂದಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಒಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ವರ್ಷದ ಉತ್ತರ ಪ್ರದೇಶ ಚುನಾವಣೆಯಲ್ಲಿ ಹೀನಾಯ ಸೋಲಿನಿಂದಾಗಿ ಪ್ರಿಯಾಂಕಾ ಗಾಂಧಿ ಅವರಿಗೆ ಅಧ್ಯಕ್ಷೀಯ ಪಟ್ಟವನ್ನು ನೀಡಲು ಕೆಲವರು ವಿರೋಧಿಸುತ್ತಿದ್ದಾರೆ. ಇದನ್ನೂ ಓದಿ: ಅತ್ಯಾಚಾರಿಗಳ ಬಿಡುಗಡೆ ಕ್ರಮ ಹಿಂಪಡೆಯಲಿ- ದ್ರೌಪದಿ ಮುರ್ಮುಗೆ ಪತ್ರ
Advertisement
Advertisement
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಹೆಸರು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರಾಗಿ ಗಾಂಧಿಯೇತರರು ನಾಯಕರಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಡಿಕೆಶಿಯವರೇ ಮೊಟ್ಟೆ ಹೊಡೆಸಿರಬೇಕು: ಕಟೀಲ್