ತಿರುವನಂತಪುರಂ: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ.
ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೂಕಂಪ – 280 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ
Visuals of the trashing of @RahulGandhi’s Wayanad office by activists of @CPIMKerala student wing, SFI. Would @pinarayivijayan & @SitaramYechury take disciplinary action or let their silence condone such behaviour? Is this their idea of politics? pic.twitter.com/uu5DSIB3mW
— Shashi Tharoor (@ShashiTharoor) June 24, 2022
ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರರಿಗೂ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಪೇಪರ್ ಬಿಕ್ಕಟ್ಟು – ವಿದ್ಯಾರ್ಥಿಗಳಿಗೆ ಸಿಗ್ತಿಲ್ಲ ಪಠ್ಯ, ನೋಟ್ ಪುಸ್ತಕ
ಸಿಪಿಐ(M) ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.