ನವದೆಹಲಿ: ಮಾನನಷ್ಟ ಪ್ರಕರಣದಲ್ಲಿ (Defamation Case) ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ, 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯ ಆದೇಶವನ್ನು ಶುಕ್ರವಾರ ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ. ಅವರ ವಿರುದ್ಧ ಇನ್ನು 10 ಕ್ರಿಮಿನಲ್ ಕೇಸ್‌ಗಳು ಬಾಕಿ ಇವೆ ಎಂದು ಆದೇಶದ ವೇಳೆ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ತಿಳಿಸಿದ್ದಾರೆ.
ಪ್ರಸುತ್ತ ಗುಜರಾತ್ ಹೈಕೋರ್ಟ್ ಕೆಳಹಂತದ ನ್ಯಾಯಾಲಯದ ಆದೇಶ ಎತ್ತಿ ಹಿಡಿದಿರುವ ಹಿನ್ನಲೆ ಅವರ ರಾಜಕೀಯ ಭವಿಷ್ಯ ಏನಾಗಬಹುದು ಎಂಬುದು ಎಲ್ಲರ ಕುತೂಹಲವಾಗಿದೆ. ಈ ಹಿಂದೆ ನಡೆದ ಹಲವು ಪ್ರಕರಣಗಳ ಆಧಾರದ ಮೇಲೆ ರಾಹುಲ್ ಗಾಂಧಿ ರಾಜಕೀಯ ಭವಿಷ್ಯ ಏನಾಗಬಹುದು ಎಂದು ಗಮನಿಸೋಣ.
Advertisement
Advertisement
ಕೆಳ ಹಂತದ ಆದೇಶವನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿರುವ ಹಿನ್ನಲೆ ಸದ್ಯ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶಗಳಿದೆ. ಮೊದಲು ಅವರು ಜಾಮೀನು ಅರ್ಜಿ ಸಲ್ಲಿಸಬೇಕಾಗುತ್ತದೆ. ಜಾಮೀನು ಅರ್ಜಿ ಪುರಸ್ಕರಿಸಿ ಪ್ರಕರಣದ ವಿಚಾರಣೆ ನಡೆಸಿದರೆ ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್ ಸಿಗಲಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದರೆ ಅವರು ಜೈಲಿಗೆ ಹೋಗಬೇಕಾದ ಅನಿವಾರ್ಯ ಸೃಷ್ಟಿಯಾಗಲಿದೆ.
Advertisement
ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ ರಾಹುಲ್ ಗಾಂಧಿ ಅವರನ್ನು ದೋಷಮುಕ್ತಗೊಳಿಸಿದರೆ ಇಡಿ ಪ್ರಕರಣದಿಂದ ಅವರು ಪಾರಾಗಲಿದ್ದಾರೆ. ಒಂದು ವೇಳೆ ಅವರು ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ಕೂಡಾ ಆದೇಶ ನೀಡಿದರೆ ಅವರ ರಾಜಕೀಯ ಜೀವನ ಮಸುಕಾಗಲಿದೆ. ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ 2 ವರ್ಷದ ಶಿಕ್ಷೆ ನೀಡಿರುವ ಹಿನ್ನಲೆ 2 ವರ್ಷದ ಸೆರೆವಾಸದ ಜೊತೆಗೆ ಅವರು ಜನಪ್ರತಿನಿಧಿಗಳ ಕಾನೂನಿನ ಪ್ರಕಾರ 6 ವರ್ಷ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಲಿದ್ದಾರೆ. ಒಟ್ಟು 8 ವರ್ಷಗಳ ರಾಜಕೀಯ ಬದುಕು ನಾಶವಾಗಲಿದೆ. ಅವರ ಪ್ರಧಾನಿಯಾಗಬೇಕು ಎಂಬ ಕನಸಿಗೆ ದೊಡ್ಡ ಹಿನ್ನಡೆಯಾಗಲಿದೆ.
Advertisement
ಇಂತಹ ಪ್ರಕರಣ ನ್ಯಾಯಾಲಯದ ಮುಂದೆ ಬಂದಿತ್ತು. 2013 ಮತ್ತು 2018ರ ಲಿಲಿ ಥಾಮಸ್ ಮತ್ತು ಲೋಕ ಪ್ರಹಾರಿ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್, ಕೆಳ ಹಂತದ ನ್ಯಾಯಾಲಯಗಳ ಶಿಕ್ಷೆಯನ್ನು ಅಮಾನತುಗೊಳಿಸಿದರೆ ಅಥವಾ ಮೇಲ್ಮನವಿ ನ್ಯಾಯಾಲಯವು ಶಿಕ್ಷೆಗೆ ತಡೆ ನೀಡಿದರೆ, ಜನಪ್ರತಿನಿಧಿ ಕಾಯ್ದೆಯಡಿ ಸಾರ್ವಜನಿಕ ಪ್ರತಿನಿಧಿಯ ಅನರ್ಹತೆಯನ್ನು ರದ್ದುಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಹಿನ್ನಡೆ- ಮಾನನಷ್ಟ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
ಈ ಹಿಂದೆ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಪ್ರಕರಣದಲ್ಲಿ ಈ ಬೆಳವಣಿಗೆಯಾಗಿದೆ. ಕೊಲೆ ಯತ್ನ ಪ್ರಕರಣದಲ್ಲಿ ಮೊಹಮ್ಮದ್ ಫೈಜಲ್‌ಗೆ ಕೆಳ ಹಂತದ ನ್ಯಾಯಾಲಯವು 10 ವರ್ಷಗಳ ಶಿಕ್ಷೆ ವಿಧಿಸಿತ್ತು, ಇದರಿಂದ ಸಂಸದ ಫೈಝಲ್ ತಮ್ಮ ಸಂಸತ್ ಸದಸ್ಯತ್ವ ಕಳೆದುಕೊಂಡಿದ್ದರು.
ಫೈಝಲ್ ಕೆಳ ನ್ಯಾಯಾಲಯದ ವಿರುದ್ಧ ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೆಳ ನ್ಯಾಯಾಲಯದ ತೀರ್ಪಿಗೆ ಕೇರಳ ಉಚ್ಚ ನ್ಯಾಯಾಲಯ ತಡೆ ನೀಡಿತ್ತು. ಬಳಿಕ ಫೈಝಲ್ ಅವರ ಸಂಸತ್ತಿನ ಸದಸ್ಯತ್ವವನ್ನು ಸಹ ಪುನಃಸ್ಥಾಪಿಸಲಾಯಿತು. ರಾಹುಲ್ ಗಾಂಧಿ ವಿಚಾರದಲ್ಲಿ ಗುಜರಾತ್ ಹೈಕೋರ್ಟ್ ಮೇಲಿದ್ದ ಭರವಸೆ ಹುಸಿಯಾಗಿರುವ ಹಿನ್ನಲೆ ಅವರ ನಂಬಿಕೆ ಇನ್ನು ಸುಪ್ರೀಂಕೋರ್ಟ್ ಮಾತ್ರವಾಗಿದೆ. ಇದನ್ನೂ ಓದಿ: Karnataka Budget 2023: ರಾಜ್ಯಕ್ಕೆ 7,780 ಕೋಟಿ ರೂ. ನಷ್ಟ, 26,954 ಕೋಟಿ GST ಕೊರತೆ
Web Stories