ನವದೆಹಲಿ: ಅಗ್ನಿಪಥ್ (Agnipath Scheme) ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಕೇಂದ್ರ ಸರ್ಕಾರವು ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ನಲ್ಲಿ ಕಾಂಗ್ರೆಸ್ ನಾಯಕ ಯುವಕರ ಗುಂಪಿನೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಯುವಕರು ಬಿಹಾರದ ಚಂಪಾರಣ್‌ನಿಂದ ಬಂದವರು ಎಂದು ಹೇಳಿದ್ದಾರೆ. ನಿರುದ್ಯೋಗದ ಸಮಸ್ಯೆಯನ್ನು ‘ಬೀದಿಗಳಿಂದ ಸಂಸತ್ತಿನವರೆಗೆ’ ಎತ್ತುವವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ
Advertisement
Advertisement
ತಾತ್ಕಾಲಿಕ ನೇಮಕಾತಿಗೆ ಅಗ್ನಿವೀರ್ ಯೋಜನೆ ಜಾರಿಗೊಳಿಸಿ, ಸೇನೆ ಮತ್ತು ಭಾರತೀಯ ವಾಯುಪಡೆಯ ಶಾಶ್ವತ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸುವ ಮೂಲಕ ಸರ್ಕಾರವು ಅಸಂಖ್ಯಾತ ಯುವಕರ ಕನಸನ್ನು ನುಚ್ಚುನೂರು ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
‘ಸತ್ಯಾಗ್ರಹದ ನಾಡು’ ಚಂಪಾರಣ್‌ನಿಂದ ದೆಹಲಿಗೆ ಬರಲು 1,100 ಕಿಲೋಮೀಟರ್‌ಗಳಷ್ಟು ಪಾದಯಾತ್ರೆ ಮಾಡಿರುವ ಯುವಕರ ಹೋರಾಟವನ್ನು ಮಾಧ್ಯಮಗಳು ಪ್ರಸಾರ ಮಾಡದಿರುವುದು ಬೇಸರದ ಸಂಗತಿಯಾಗಿದೆ. ಉದ್ಯೋಗದ ಸಮಸ್ಯೆಯನ್ನು ಬೀದಿಗಳಿಂದ ಸಂಸತ್ತಿನ ವರೆಗೆ ಪ್ರಶ್ನಿಸುವ ಯುವಕರೊಂದಿಗೆ ನಾವಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಪ್ರಕರಣ- ಬಾಂಬ್ ಎಸೆದವನ ಮನೆ ಜಪ್ತಿ
Advertisement
ಏನಿದು ಅಗ್ನಿಪಥ್ ಯೋಜನೆ?
2022 ರ ಜೂ.14 ರಂದು ಅಗ್ನಿಪಥ್ ಯೋಜನೆಯನ್ನು ಘೋಷಿಸಲಾಯಿತು. 17.5 ವರ್ಷ ಮೇಲ್ಪಟ್ಟು 21 ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳ ವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅಗ್ನಿವೀರರಾದ ಪ್ರತಿಯೊಬ್ಬರಿಗೂ ನಾಲ್ಕು ವರ್ಷದ ಅವಧಿಗೆ ಮಾತ್ರ ವರ್ಷಕ್ಕೆ 4.62 ಲಕ್ಷದಿಂದ 6.92 ಲಕ್ಷದವರೆಗೆ ಸಂಬಳದ ಪ್ಯಾಕೇಜ್ ಇರುತ್ತದೆ.
ತಿಂಗಳಿಗೆ 30 ರಿಂದ 40 ಸಾವಿರದ ವರೆಗೆ ಸಂಬಳ ಸಿಗಲಿದೆ. ನಾಲ್ಕು ವರ್ಷ ಸೇವೆ ಸಲ್ಲಿಸಿ ಬಿಡುಗಡೆ ಹೊಂದುವ ಅಗ್ನಿವೀರರಿಗೆ 11.70 ಲಕ್ಷ ರೂ. ಸೇವಾ ನಿಧಿಯಾಗಿ ಕೊಡಲಾಗುತ್ತದೆ. ಅಗ್ನಿವೀರರು ನಿವೃತ್ತರಾದ ಮೇಲೆ ಅವರಿಗೆ ಪಿಂಚಣಿ ಇರುವುದಿಲ್ಲ. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ವಿಶ್ವದಾಖಲೆ ಬರೆದ ನರೇಂದ್ರ ಮೋದಿ
ಅಗ್ನಿಪಥ್ ಯೋಜನೆಯ ಪ್ರಕಾರ ಸುಮಾರು ಗರಿಷ್ಠ 45 ಸಾವಿರ ಯುವಕ ಯುವತಿಯರನ್ನು ಸೇವೆಗೆ ಸೇರಿಸಿಕೊಳ್ಳಲಾಗುತ್ತದೆ. ಇದರಲ್ಲಿ ಶೇ 25 ರಷ್ಟು ಅಗ್ನಿವೀರರು ಸೇನೆಯಲ್ಲಿ 15 ವರ್ಷ ಅಧಿಕಾರೇತರ ಶ್ರೇಣಿಯಲ್ಲಿ ಕೆಲಸ ಮಾಡುತ್ತಾರೆ. ಹೊರ ಬಂದವರಿಗೆ ದೇಶದ ಕಾರ್ಪೊರೇಟ್ ವಲಯ ಸೇರಿದಂತೆ ನಾನಾ ವಲಯಗಳಲ್ಲಿ ಸೇವೆ ಸಲ್ಲಿಸಲು ಆದ್ಯತೆ ನೀಡಲಾಗುತ್ತದೆ.