ನವದೆಹಲಿ: ಮಾನನಷ್ಟ (Defamation) ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿರುವ ಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ (Rahul Gandhi) ಸೋಮವಾರ ಸೂರತ್ ಕೋರ್ಟ್‌ನಲ್ಲಿ ಮೇಲ್ಮನವಿ (Appeal) ಸಲ್ಲಿಸುವ ಸಾಧ್ಯತೆಯಿದೆ.
ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ ಅವರ ಕಾನೂನು ತಂಡವು 2 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸೂರತ್‌ನ (Surat) ಸೆಷನ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಆಧಾರಿಸಿ ವರದಿಯಾಗಿದೆ. ಇದನ್ನೂ ಓದಿ: ಭಾರತದಿಂದ 85 ದೇಶಗಳಿಗೆ ರಕ್ಷಣಾ ಸಾಮಾಗ್ರಿ ರಫ್ತು – 1,5920 ಕೋಟಿ ದಾಖಲೆ
Advertisement
Advertisement
ರಾಹುಲ್ ಗಾಂಧಿ ಹಿರಿಯ ನಾಯಕರಾದ ಕೆ.ಸಿ ವೇಣುಗೋಪಾಲ್ (K.C.Venugopal) ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.
Advertisement
ರಾಜ್ಯಸಭಾ ಸದಸ್ಯ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ (Abhishek Singhvi) ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಿ ಹಲವು ಸಲಹೆ ನೀಡಿದ್ದಾರೆ. ಸೂರತ್‌ನ ಖ್ಯಾತ ಕ್ರಿಮಿನಲ್ ಮತ್ತು ಹಿರಿಯ ವಕೀಲ ಆರ್‌ಎಸ್ ಚೀಮಾ (R.S.Cheema) ಅವರು ರಾಹುಲ್ ಪರ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸರ್ವಾಧಿಕಾರದ ವಿರುದ್ಧ ರಾಹುಲ್ ಗಾಂಧಿ ಕ್ರಾಂತಿ – ಜೈಲಿನಿಂದ ಬರ್ತಿದ್ದಂತೆ ಬಿಜೆಪಿ ವಿರುದ್ಧ ಸಿಧು ಕಿಡಿ
Advertisement
ಏನಿದು ಪ್ರಕರಣ?
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (Narendra Modi) ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ (BJP) ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ಮಾರ್ಚ್ 23 ರಂದು ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ಜೊತೆ ಈ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: 10 ತಿಂಗಳ ನಂತ್ರ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆ – ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ
2 ವರ್ಷ ಜೈಲು ಶಿಕ್ಷೆಯಾದ ಹಿನ್ನೆಲೆಯಲ್ಲಿ ಲೋಕಸಭಾ ಸಚಿವಾಲಯ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಅತ್ಯಂತ ವೇಗದಲ್ಲಿ ಚಲಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಮೋದಿ ಚಾಲನೆ