2 ಬಾರಿ ಟಿಕೆಟ್‌ ಕ್ಯಾನ್ಸಲ್‌ ಮಾಡಿದ್ರೂ ಡಿಕೆಶಿ ಭೇಟಿಗೆ ಅವಕಾಶ ನೀಡದ ರಾಹುಲ್‌!

Public TV
1 Min Read
Rahul Gandhi DK Shivakumar

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ (Rahul Gandhi) ಭೇಟಿಗೆ ಕಾದು ಕುಳಿತು ಅವಕಾಶ ಸಿಗದೇ ಬೆಂಗಳೂರಿಗೆ (Bengaluru) ಮರಳಿದ್ದಾರೆ.

ಹೌದು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಡಿಕೆ ಶಿವಕುಮಾರ್‌ ಅವರು ಜುಲೈ 8 ಮಂಗಳವಾರ ದೆಹಲಿಗೆ ತೆರಳಿದ್ದರು. ಮಂಗಳವಾರ ಮತ್ತು ಬುಧವಾರ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿಯಾಗಿ ಇಲಾಖೆ ಸಂಬಂಧ ಮಾತುಕತೆ ನಡೆಸಿದ್ದರು.

 

ಗುರುವಾರ ಡಿಕೆಶಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದರು. ಹಾಗೆ ನೋಡಿದರೆ ಡಿಕೆಶಿ ಗುರುವಾರವೇ ರಾತ್ರಿ ಬೆಂಗಳೂರಿಗೆ ಮರಳಬೇಕಿತ್ತು. ಭೇಟಿಗೆ ಅವಕಾಶ ಸಿಗಬಹುದು ಎಂಬ ಕಾರಣಕ್ಕೆ ಎರಡು ಬಾರಿ ಡಿಕೆಶಿ ವಿಮಾನ ಟಿಕೆಟ್‌ ಕ್ಯಾನ್ಸಲ್‌ ಮಾಡಿದ್ದರು. ಇದನ್ನೂ ಓದಿ: ಸಿಎಂ ಉತ್ತರ ಕೊಟ್ಮೇಲೆ ಎಲ್ಲಾ ಮುಗೀತು; ದೆಹಲಿಯಿಂದ ವಾಪಸ್ಸಾದ ಡಿಕೆಶಿ ಫಸ್ಟ್ ರಿಯಾಕ್ಷನ್

ಗುರುವಾರ ರಾಹುಲ್‌ ಗಾಂಧಿ ಬಿಹಾರಕ್ಕೆ ತೆರಳಿದ್ದರಿಂದ ಶುಕ್ರವಾರ ಬೆಳಗ್ಗೆ ಭೇಟಿಯಾಗಬಹುದು ಎಂಬ ನಿರೀಕ್ಷೆಯಲ್ಲಿ ಡಿಕೆಶಿ ಇದ್ದರು. ಆದರೆ ಇಂದು ರಾಹುಲ್‌ ಗಾಂಧಿ ಒಡಿಶಾಕ್ಕೆ ತೆರಳಿದ್ದರಿಂದ ಡಿಕೆಶಿ ಪ್ರಿಯಾಂಕಾ ವಾದ್ರಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು. ಆದರೆ ಪ್ರಿಯಾಂಕಾ ಭೇಟಿ ಸಿಗದ ಕಾರಣ ಡಿಕೆಶಿ ಮಧ್ಯಾಹ್ನ ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ.

ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ, ವಿಧಾನಪರಿಷತ್‌ ಸದಸ್ಯರ ನೇಮಕ ಸೇರಿ ವಿವಿಧ ವಿಷಯಗಳ ಬಗ್ಗೆ ರಾಹುಲ್‌ ಜೊತೆ ಚರ್ಚೆ ನಡೆಸಲು ಡಿಕೆಶಿ ಬಯಸಿದ್ದರು. ರಾಜ್ಯ ರಾಜಕೀಯದಲ್ಲಿ ಬಹಳಷ್ಟು ಬೆಳವಣಿಗೆ ನಡೆಯುತ್ತಿದ್ದರೂ ರಾಹುಲ್‌ ಗಾಂಧಿ ಅವರು ಡಿಕೆಶಿ ಭೇಟಿಗೆ ಸಮಯವಕಾಶ ನೀಡದಿರುವುದು ಭಾರೀ ಕುತೂಹಲ ಮೂಡಿಸಿದೆ.

Share This Article