ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಇಂಧನ ಬೆಲೆ ಏರಿಕೆ ಕುರಿತು ಸೈಕಲ್ ತುಳಿದು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ ರಾಹುಲ್ ಗಾಂಧಿ, ಕೋಲಾರದ ಮಾಲೂರಿನಲ್ಲಿ ಸೈಕಲ್ ತುಳಿದು ಪ್ರತಿಭಟನೆ ನಡೆಸಿದರು. ಸಾವಿರಾರು ಕಾರ್ಯಕರ್ತರ ನಡುವೆ ಸೈಕಲ್ ತುಳಿದ ರಾಹುಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
Advertisement
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಅನುಸರಣೆ ಮಾಡುತ್ತಿದೆ. ಇಂಧನ ಬೆಲೆ ಹೆಚ್ಚಳ ಮಾಡುವ ಮೂಲಕ ಬಾರಿ ಪ್ರಮಾಣದ ಆದಾಯ ಗಳಿಸುತ್ತಿರುವ ಕೇಂದ್ರ ಸರ್ಕಾರ ಈ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿ, ನಿಮಗೇ ಸಾಧ್ಯವಿದ್ದರೆ ಪೆಟ್ರೋಲ್ ಬೆಲೆ ಕಡಿಮೆ ಮಾಡಿ ಎಂದು ಸವಾಲು ಎಸೆದರು.
Advertisement
ಬಳಿಕ ರೋಡ್ ಶೋ ವೇಳೆ ಸಿಲಿಂಡರ್ ಹಿಡಿದು ಕೇಂದ್ರ ವಿರುದ್ಧ ಪ್ರತಿಭಟನೆ ಮಾಡಿದರು. ಈ ವೇಳೆ ಎತ್ತಿನ ಗಾಡಿ ಮೇಲೆ ನಿಂತು ಭಾಷಣ ಮಾಡಿದ ಅವರು, ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮಂದುವರೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಆದ್ರೆ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಅರೋಪಿಸುತ್ತೀರಾ ಸದ್ಯ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರಿದೆ. ಇದನ್ನೂ ಜಿಎಸ್‍ಟಿ ವ್ಯಾಪ್ತಿಗೆ ಏಕೆ ಒಳಪಡಿಸಿಲ್ಲ. ಈ ವಿಧಾನಸಭೆ ಚುನಾವಣೆಯಲ್ಲಿ ಜನ ಬಿಜೆಪಿ ಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
Advertisement
ಬಡವರಿಗಾಗಿ ಬಿಜೆಪಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿಲ್ಲ. ರೈತರ ಸಾಲ ನನ್ನ ಮಾಡಿಲ್ಲ. ರಾಜ್ಯದಲ್ಲಿ ರೈತರ ಸಾಲ ಮನ್ನಾ ಆಗಿದೆ ಆದರೆ ಕೇಂದ್ರದಲ್ಲಿ ಯಾಕೆ ಸಾಲ ಮನ್ನಾ ಮಾಡಿಲ್ಲ. ಲೋಕಸಭೆ ಚುನಾವಣೆಗೆ ಒಂದು ವರ್ಷ ಉಳಿದಿದೆ. 2019 ರಲ್ಲಿ ನಮ್ಮ ಸರ್ಕಾರ ಬಂದಾಗ ಸಾಲ ಮನ್ನಾ ಮಾಡುತ್ತೇವೆ ಎಂದರು.
LIVE: Congress President Rahul Gandhi addresses a gathering in Hoskote. #CongressMathomme https://t.co/8zkmp6CPmS
— Karnataka Congress (@INCKarnataka) May 7, 2018
ಗುಜರಾತ್ ನಲ್ಲಿ ನರೇಂದ್ರ ಮೋದಿ ಎಲ್ಲಾ ಸಂಸ್ಥೆಗಳನ್ನ ಖಾಸಗೀಕರಣ ಮಾಡಿದ್ದಾರೆ. ರಾಜ್ಯದಲ್ಲಿ ಉಚಿತ ಅಕ್ಕಿ, ಶಿಕ್ಷಣ, ಇಂದಿರಾ ಕ್ಯಾಂಟೀನ್ ಮೂಲಕ ಊಟ ನೀಡುತ್ತಿದ್ದೇವೆ. ಮೋದಿಯವರೆ ಯಾವುದಾದರೂ ಒಂದು ಬಡವರ ಪರವಾದ ಕಾರ್ಯಕ್ರಮ ಹೇಳಿ. ರಾಜ್ಯದ ಬಿಜೆಪಿ ನಾಯಕ ಯಡಿಯೂರಪ್ಪ ಭ್ರಷ್ಟಾಚಾರದಲ್ಲಿ ತೊಡಗಿದ್ದವರು. ಯಾವ ಆಧಾರದ ಮೇಲೆ ಅವರನ್ನು ಮುಖ್ಯಮಂತ್ರಿ ಅಭಯರ್ಥಿಯನ್ನಾಗಿ ಘೋಷಣೆ ಮಾಡಿದ್ದೀರಿ. ದೇಶದಲ್ಲಿ ಆರ್‍ಎಸ್‍ಎಸ್ ಮತ್ತು ಮಹಾತ್ಮಗಾಂಧಿ ಆದರ್ಶಗಳ ನಡುವೆ ಇಂದು ಸಂಘರ್ಷ ನಡೆಯುತ್ತಿದೆ ಎಂದು ಆರೋಪಿಸಿದರು.