ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರದಲ್ಲೇ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಸ್ತುತ ಎಐಸಿಸಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಶುಕ್ರವಾರದಂದು ಖಚಿತಪಡಿಸಿದ್ದಾರೆ.
ಅಕ್ಟೋಬರ್ 19ರ ರಂದು ದೀಪಾವಳಿಯ ನಂತರ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. 2019ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಅಂತ ಹೇಳಲಾಗಿದೆ.
Advertisement
ದೀರ್ಘ ಕಾಲದಿಂದ ಕಾಂಗ್ರೆಸ್ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಈ ವಿಚಾರದ ಬಗ್ಗೆ ದೆಹಲಿಯಲ್ಲಿ ನಡೆದ ಪ್ರಣಬ್ ಮುಖರ್ಜಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದ ವೇಳೆ ಖಚಿತಪಡಿಸಿದ್ರು. ಈ ವೇಳೆ ಕಾರ್ಯಕ್ರಮದಲ್ಲಿ ಹಾಜರಿದ್ದ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡಲು ನಿರಾಕರಿಸಿದ್ರು.
Advertisement
Advertisement
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳು ಇತ್ತೀಚೆಗೆ ವರದಿ ಮಾಡಿದ್ದವು. ಇದಕ್ಕೆ ಹಲವು ಕಾಂಗ್ರೆಸ್ ಸದಸ್ಯರು ನೇರವಾಗಿಯೇ ಬೆಂಬಲ ಸೂಚಿಸಿದ್ದರು.
Advertisement
ಮಂಗಳವಾರದಂದು ಪಕ್ಷದ ಮುಖಂಡರಾದ ಸಚಿನ್ ಪೈಲಟ್, ರಾಹುಲ್ ಗಾಂಧಿ ಕಾಂಗ್ರೆಸ್ ಅಧಕ್ಷರಾಗಲು ಪಕ್ಷದಲ್ಲಿ ಸಮೂಹಿಕವಾಗಿ ಪ್ರಸ್ತಾವನೆ ಬಂದಿದೆ ಎಂದು ಹೇಳಿದ್ದರು. ಪಕ್ಷವನ್ನ ಮುನ್ನಡೆಸಲು ರಾಹುಲ್ ಗಾಂಧಿಗೆ ಇದು ಸೂಕ್ತ ಸಮಯ ಎಂದು ಅವರು ಹೇಳಿದ್ದರು.