Connect with us

ಶಾಲಾ ಆವರಣದಲ್ಲಿ ಟ್ರ್ಯಾಕ್ಟರ್ ಹರಿದು 10ನೇ ತರಗತಿ ವಿದ್ಯಾರ್ಥಿ ಸಾವು

ಶಾಲಾ ಆವರಣದಲ್ಲಿ ಟ್ರ್ಯಾಕ್ಟರ್ ಹರಿದು 10ನೇ ತರಗತಿ ವಿದ್ಯಾರ್ಥಿ ಸಾವು

ರಾಯಚೂರು: ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಾನ್ವಿ ತಾಲೂಕಿನ ಕಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಟ್ರ್ಯಾಕ್ಟರ್ ಹರಿದು 10 ನೇ ತರಗತಿ ವಿದ್ಯಾರ್ಥಿ ಬಸವಲಿಂಗಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಶಾಲೆಗೆ ಕಾಂಪೌಂಡ್ ಇಲ್ಲದ ಹಿನ್ನೆಲೆಯಲ್ಲಿ ಶಾಲಾ ಆವರಣವನ್ನೇ ಜನ ರಸ್ತೆಯನ್ನಾಗಿ ಬಳಸುತ್ತಿರುವುದೇ ಅವಘಡಕ್ಕೆ ಕಾರಣವಾಗಿದೆ. ಅನನುಭವಿ ಚಾಲಕ ಭೀಮರಾಯ ನಿಯಂತ್ರಣ ತಪ್ಪಿ ವಿದ್ಯಾರ್ಥಿ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಾನೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಚಾಲಕ ಪರಾರಿಯಾಗಿದ್ದಾನೆ.

ಘಟನೆ ಖಂಡಿಸಿ ವಿದ್ಯಾರ್ಥಿಗಳು ಸುಮಾರು ಒಂದು ಗಂಟೆ ಕಾಲ ರಾಯಚೂರು- ಮಾನ್ವಿ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ. ಮೃತ ವಿದ್ಯಾರ್ಥಿ ಕುಟುಂಬಕ್ಕೆ ಶಿಕ್ಷಣ ಇಲಾಖೆಯಿಂದ ಪರಿಹಾರ ನೀಡಲಾಗುವುದು ಹಾಗೂ ಶಾಲಾ ಕಾಂಪೌಂಡ್ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಡಿಡಿಪಿಐ ರಾಮಾಂಜನೇಯ ಹೇಳಿದ್ದಾರೆ.

ಮತ್ತೊಂದು ಘಟನೆಯಲ್ಲಿ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಹತ್ತಿರ ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಪಿಯುಸಿ ಓದುತ್ತಿದ್ದ 18 ವರ್ಷದ ವಿದ್ಯಾರ್ಥಿ ಸುನೀಲ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement