ರಾಯಚೂರು: ಇತ್ತೀಚೆಗೆ ಟಾಟಾ ಏಸ್ ಪಲ್ಟಿಯಾಗಿ ಕಾಲೇಜಿನಿಂದ ಹಾಸ್ಟೆಲ್‍ಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ರಾಯಚೂರು (Raichur) ಸರ್ಕಾರಿ ಇಂಜಿನಿಯರಿಂಗ್ ಕಾಲೇಜು (Engineering College) ವಿದ್ಯಾರ್ಥಿಗಳು (Students) ಕಾಲೇಜು ಆವರಣದಲ್ಲೇ ಹಾಸ್ಟೆಲ್ ವ್ಯವಸ್ಥೆ ಮಾಡುವಂತೆ ಪ್ರತಿಭಟನೆ (Protest) ನಡೆಸಿದ್ದಾರೆ.
ಡಿ.16 ರಂದು ನಡೆದಿದ್ದ ಅಪಘಾತದಲ್ಲಿ 8 ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿತ್ತು. ವಿದ್ಯಾರ್ಥಿಗಳಾದ ಸುಮಿತ್, ವಿರೇಶ್, ಲಿಂಗರಾಜು, ನಾಗೇಶ್‍ಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿ ವಿಮ್ಸ್ ಹಾಗೂ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರ ಕಾವು ಪಡೆದಿದ್ದು, ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೆಸಿ ಜನರಲ್ ಆಸ್ಪತ್ರೆ ಎಡವಟ್ಟಿನಿಂದ ಮಗು ಸಾವು- ಮಗು ಸತ್ತೋದ ಮೇಲೆ ಬಿಲ್ ಕೇಳಿದ ಆರೋಪ
Advertisement
Advertisement
ನಗರದ ಹೊರವಲಯದ ಯರಮರಸ್ ಕ್ಯಾಂಪ್‍ನಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸುಮಾರು 13 ಕಿಮೀ ದೂರದ ಬೋಳಮಾನದೊಡ್ಡಿ ರಸ್ತೆಯಲ್ಲಿ ಹಾಸ್ಟೆಲ್ ನೀಡಲಾಗಿದೆ. 300ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜಿಗೆ ಬರಲು ಬಸ್ ವ್ಯವಸ್ಥೆ ಇಲ್ಲದೆ ಪ್ರತಿನಿತ್ಯ ಸಮಸ್ಯೆ ಎದುರಿಸಬೇಕಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‍ನಲ್ಲೇ ಹಾಸ್ಟೆಲ್ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಾಥಪುರದಲ್ಲಿ ಅದ್ಧೂರಿ ಷಷ್ಠಿ ರಥೋತ್ಸವ