ರಾಯಚೂರು: ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು (Lingasuguru) ತಾಲ್ಲೂಕಿನ ಕವಿತಾಳ ಗ್ರಾಮದ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ದೇವತಗಲ್ ಗ್ರಾಮದ ನಿವಾಸಿ ರಂಗನಾಥ ನಾಯಕ (35) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್
Advertisement
Advertisement
ಲಿಂಗಸುಗೂರು-ಕವಿತಾಳ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಲಿಂಗಸುಗೂರು ಮೂಲಕ ರಾಯಚೂರಿಗೆ ಬರುತ್ತಿದ್ದ ಬಾದಾಮಿ ಘಟಕಕ್ಕೆ ಸೇರಿದ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
ಸದ್ಯ ಈ ಘಟನೆ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಗುರ್ಜಾಪುರ ಗ್ರಾಮಸ್ಥರಲ್ಲಿ ಹೆಚ್ಚಿದ ಮೊಸಳೆ ಆತಂಕ:
ಇನ್ನೂ ಮತ್ತೊಂದು ಘಟನೆಯಲ್ಲಿ ಜಿಲ್ಲೆಯ ಗುರ್ಜಾಪುರ ಬ್ಯಾರೇಜ್ ಬಳಿಯ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಮೊಸಳೆ ಹಾವಳಿ ಹೆಚ್ಚಾಗುತ್ತಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಕೃಷ್ಣಾ ನದಿಯಲ್ಲಿ (Krishna River) ನೀರು ಕಡಿಮೆಯಾದ ಪರಿಣಾಮ ಮೊಸಳೆ ಕಾಟ ಹೆಚ್ಚಾಗಿದ್ದು, ಜನರಲ್ಲಿ ಆತಂಕದ ವಾತಾವರಣ ಶುರುವಾಗಿದೆ. ರಸ್ತೆ ಮೇಲೆ ಬೃಹದಾಕಾರದ ಮೊಸಳೆ ಓಡಾಡುವ ವಿಡಿಯೋ ಒಂದು ವೈರಲ್ ಆಗಿದ್ದು, ಗ್ರಾಮಸ್ಥರು ರಾತ್ರಿ ಒಬ್ಬರೇ ಒಡಾಡಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಗಾಗ್ಗೆ ಗುರ್ಜಾಪುರ, ಕಾಡ್ಲೂರು ಗ್ರಾಮಸ್ಥರಿಗೆ ಮೊಸಳೆಗಳು ಕಾಣಿಸಿಕೊಳ್ಳುತ್ತಿದ್ದು, ಗುರ್ಜಾಪುರ ಬ್ಯಾರೇಜ್ ಸೇತುವೆ ಮೇಲೆ ಓಡಾಡಲು ಬೈಕ್ ಸವಾರರು ಹೆದರಿದ್ದಾರೆ. ರಾತ್ರಿಯಾದರೆ ಗ್ರಾಮಸ್ಥರಲ್ಲಿ ಮೊಸಳೆ ಆತಂಕ ಹೆಚ್ಚಾಗುತ್ತಿದೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ – ಟ್ರಾಫಿಕ್ ಜಾಮ್, ಕಿಲೋ ಮೀಟರ್‌ಗಟ್ಟಲೇ ನಿಂತ ವಾಹನಗಳು