– ರಾಯಚೂರಿನಲ್ಲಿ ಸಚಿವರಿಂದ ಧ್ವಜಾರೋಹಣ
ರಾಯಚೂರು: ಗರ್ಭಿಣಿಯರಿಗೆ ನೀಡುವ ಐರನ್ ಕ್ಯಾಲ್ಸಿಯಂ ಮಾತ್ರೆಗಾಗಿ 15 ಕೋಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಜನರ ಆರೋಗ್ಯ ಕಾಪಾಡುವ ಕೆಲಸ ನಾನು ಮಾಡುತ್ತೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
71ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಶ್ರೀ ರಾಮುಲು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಗರದ ಪೋಲೀಸ್ ಮೈದಾನದಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀರಾಮುಲು, ಮೂರು ತಿಂಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೂ ವೈದ್ಯರ ನೇಮಕ ಮಾಡುತ್ತೇವೆ ಎಂದರು.
Advertisement
Advertisement
ಅಲ್ಲದೆ ಗರ್ಭಿಣಿಯರಿಗೆ ನೀಡುವ ಐರನ್ ಕ್ಯಾಲ್ಸಿಯಂ ಮಾತ್ರೆಗಾಗಿ 15 ಕೋಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಜನರ ಆರೋಗ್ಯ ಕಾಪಾಡುವ ಕೆಲಸ ನಾನು ಮಾಡುತ್ತೇನೆ ಎಂದು ಹೇಳಿದರು.
Advertisement
ಕಾರ್ಯಕ್ರಮದಲ್ಲಿ ವಿವಿಧ ತಂಡಗಳು ಉಸ್ತುವಾರಿ ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು. ಪೋಲೀಸ್, ಗೃಹ ರಕ್ಷಕ ದಳ ಹಾಗೂ ಎನ್ ಸಿಸಿ, ಎನ್ ಎಸ್, ಸ್ಕೌಟ್ & ಗೈಡ್ಸ್ ಹಾಗೂ ಭಾರತ ಸೇವಾದಳ ಆಕರ್ಷಕ ಪಥಸಂಚಲನ ನಡೆಸಿದವು. ವಿವಿಧ ಶಾಲಾ ಮಕ್ಕಳು ನೃತ್ಯ ಪ್ರದರ್ಶನ ಮೂಲಕ ಕಣ್ಮನ ಸೆಳೆದರು.
Advertisement
ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ರಾಯಚೂರು ನಗರ ಶಾಸಕ ಡಾ ಶಿವರಾಜ್ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಎನ್ ಎಸ್ ಬೋಸರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.