ರಾಯಚೂರು: ಬೆಂಗಳೂರಿನಿಂದ ಬಂದ ವ್ಯಕ್ತಿ ಏಕಾಏಕಿ ಸಾವನ್ನಪ್ಪಿದ ಹಿನ್ನೆಲೆ ಮೃತ ವ್ಯಕ್ತಿಯ ಮನೆ ಹತ್ತಿರ ಸುಳಿಯಲು ಗ್ರಾಮಸ್ಥರು ಹಾಗೂ ಸಂಬಂಧಿಕರು ಹೆದರಿಕೊಂಡಿರುವ ಘಟನೆ ಲಿಂಗಸೂಗೂರು ತಾಲೂಕಿನ ರೋಡಲಬಂಡಾ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ತಳವಾರ (54) ಇಂದು ಮಧ್ಯಾಹ್ನ ಬೆಂಗಳೂರಿನಿಂದ ದೇವದುರ್ಗದ ಸೋಮನಮರಡಿ ಗ್ರಾಮದಲ್ಲಿ ತನ್ನ ಮಗಳ ಮನೆಗೆ ಬಂದಿದ್ದರು. ಬಳಿಕ ತನ್ನ ಊರಾದ ಲಿಂಗಸುಗೂರಿನ ರೋಡಲಬಂಡಾಗೆ ಬಂದು ಎರಡು ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದ ವ್ಯಕ್ತಿ ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ್ದಾನೆಂದು ಭಾವಿಸಿರುವ ಗ್ರಾಮಸ್ಥರು ಭಯಗೊಂಡಿದ್ದಾರೆ.
Advertisement
Advertisement
ಮೃತ ದೇಹದ ಬಳಿ ಹೋಗಲು ಗ್ರಾಮಸ್ಥರು ಹಾಗೂ ಸಂಬಂಧಿಕರು ಹಿಂದೇಟು ಹಾಕಿದರು. ಮೃತ ದೇಹವನ್ನು ದೂರದಿಂದಲೇ ವೀಕ್ಷಣೆ ಮಾಡಿದರು. ಈ ಕುರಿತು ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಲಿಂಗಸೂಗೂರು ತಾಲೂಕಾ ವೈದ್ಯಾಧಿಕಾರಿ ಡಾ.ನಂದಕುಮಾರ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement
ವ್ಯಕ್ತಿಯ ಸಾವಿನ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದು, ಸಾವಿಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ತಾಲೂಕು ವೈದ್ಯಾಧಿಕಾರಿ, ಲಿಂಗಸುಗೂರು ತಹಶೀಲ್ದಾರ್ ಗ್ರಾಮದಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ. ಜೊತೆಗೆ ಮಲ್ಲಪ್ಪ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರನ್ನು ಹೋಮ್ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ.