ರಾಯಚೂರು: ರಾಜ್ಯ ಸಚಿವ ಸಂಪುಟದಲ್ಲಿ ರಾಯಚೂರು (Raicur) ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬಸನಗೌಡ ದದ್ದಲ್, ಹಿಂದುಳಿದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ.
ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.ಇದನ್ನೂ ಓದಿ: ಭಾರತದ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆ ಕ್ರಿಶ್ಚಿಯನ್ನರ ಮೇಲಿನ ದಾಳಿ – ಅಮೆರಿಕ ಸಂಸದ ಟೀಕೆ
ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಸನಗೌಡ ದದ್ದಲ್ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.ಇದನ್ನೂ ಓದಿ: ಹುಡುಗಿ ಕಾಟದಿಂದ ತಪ್ಪಿಸಿಕೊಳ್ಳೋಕೆ ರಾಯರ ಮೊರೆ – ಮಠದ ಹುಂಡಿಯಲ್ಲಿ ಪತ್ತೆಯಾಯ್ತು ವಿಚಿತ್ರ ಹರಕೆ ಪತ್ರ
