ರಾಯಚೂರು: ಯಾದಗಿರಿ, ರಾಯಚೂರು, ಕಲಬುರಗಿ ಜನರ ಬಹುದಿನದ ಬೇಡಿಕೆಯಾಗಿದ್ದ ಹಜೂರ್ ಸಾಹೇಬ್ ನಾಂದೇಡ್ ಎಕ್ಸ್‌ಪ್ರೆಸ್ (Hazur Sahib Nanded Express) ರೈಲು ಇಂದಿನಿಂದ ಸಂಚಾರ ಆರಂಭಿಸಿದೆ.
ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ನಡುವಿನ ರೈಲು ಸಂಪರ್ಕ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ರೈಲು ಮಾರ್ಗ ಆರಂಭಿಸಲಾಗಿದೆ. ರೈಲ್ವೆ ಬೋರ್ಡ್ ಸದಸ್ಯ ಬಾಬುರಾವ್ ಹಾಗೂ ರೈಲ್ವೆ ಅಧಿಕಾರಿಗಳು ಇಂದು ರೈಲಿಗೆ ಚಾಲನೆ ನೀಡಿದರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ, ಮೂವರು ಅಧಿಕಾರಿಗಳು ಸಸ್ಪೆಂಡ್: ಡಿಸಿ, ಎಸ್‌ಪಿಗೆ ನೋಟಿಸ್
Advertisement
Advertisement
ಈ ರೈಲು ಪರಿಭಣಿ, ನಾಂದೇಡ್, ಸೇಡಂ ಮಾರ್ಗವಾಗಿ ರಾಯಚೂರಿಗೆ ಬರಲಿದೆ. ರಾಯಚೂರಿನಿಂದ ಮಧ್ಯಾಹ್ನ 3:30ಕ್ಕೆ ಯಾದಗಿರಿ ಮಾರ್ಗವಾಗಿ ಮರುದಿನ ಬೆಳಿಗ್ಗೆ 6:30ಕ್ಕೆ ನಾಂದೇಡ್ ಮೂಲಕ ಪರಭಣಿ ತಲುಪುತ್ತದೆ. ಈ ರೈಲು ನಿತ್ಯ ಓಡಾಡಲಿದ್ದು ರಾಯಚೂರು, ಯಾದಗಿರಿಯಿಂದ ಮಹಾರಾಷ್ಟ್ರ, ತೆಲಂಗಾಣಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಇದನ್ನೂ ಓದಿ: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್
Advertisement
Web Stories