ರಾಯಚೂರು: ಸಾರಿಗೆ ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ (Pedestrian) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು (Raichur) ತಾಲೂಕಿನ ತುಂಗಭದ್ರಾ ಗ್ರಾಮದ ಬಳಿ ನಡೆದಿದೆ.
ಆಂಧ್ರ ಪ್ರದೇಶದ ಮಾಧವರಂನ ವೀರೇಶ್ (34) ಮೃತ ಪಾದಾಚಾರಿ. ವೀರೇಶ್ ಗಿಲ್ಲೇಸುಗೂರಿನಿಂದ ಆಂಧ್ರಪ್ರದೇಶದ ಮಾಧವರಂ ಕಡೆಗೆ ಹೊರಟಿದ್ದ ವೇಳೆ ರಾಯಚೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಸರ್ಕಾರಿ ಬಸ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಂಡ್ಯ| ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಖಲಿಸ್ತಾನಿ ಉಗ್ರರು ಕೆನಡಾ ಗುಪ್ತಚರ ಸಂಸ್ಥೆಯ ಆಸ್ತಿ: ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ