ರಾಯಚೂರು: ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ, ಕೈ ಮಾಡಿರುವ ಘಟನೆ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.
Advertisement
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಅಂತ ಆರೋಪಿಸಿ ಬಿಜೆಪಿ ಎಸ್.ಸಿ ಮೋರ್ಚಾದಿಂದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಿದ್ದರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಮುಂದಾಗಿದ್ದಕ್ಕೆ, ಪೊಲೀಸರು ಅವಕಾಶ ನೀಡಲಿಲ್ಲ. ಪ್ರತಿಕೃತಿ ಎತ್ತಿಕೊಂಡು ಹೋದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪಶ್ಚಿಮ ಠಾಣೆ ಪೊಲೀಸ್ ಕಾನ್‍ಸ್ಟೇಬಲ್ ರಾಘವೇಂದ್ರನಿಗೆ ಕಪಾಳಮೋಕ್ಷ ಮಾಡುವ ಮೂಲಕ ಮಾಜಿ ಶಾಸಕರು ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಎತ್ತುಗಳ ಜೊತೆಗೆ ಬಂದ ಅಭಿಮಾನಿಗಳನ್ನು ಭೇಟಿ ಮಾಡಿದ ಶಿವಣ್ಣ, ರಾಘಣ್ಣ
Advertisement
Advertisement
ಹೋರಾಟ ನಿರತರು ಪೊಲೀಸರೊಂದಿಗೆ ವಾಗ್ವಾದ ನಡೆಸಿ ನೂಕುನುಗ್ಗಲು ಮಾಡಿದ್ದಾರೆ. ಪೊಲೀಸರ ವಿರೋಧದ ನಡುವೆಯೇ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನಕಾರರು ಘೋಷಣೆಗಳನ್ನ ಕೂಗಿದ್ದಾರೆ. ಪೊಲೀಸರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸ್ ಕಾನ್ಸ್ ಸ್ಟೇಬಲ್ ಮಫ್ತಿಯಲ್ಲಿದ್ದರಿಂದ ನಾನು ಹಲ್ಲೆ ಮಾಡಿರುವುದರಲ್ಲಿ ತಪ್ಪಿಲ್ಲ, ನಮ್ಮ ಕಾರ್ಯಕರ್ತ ಎಂದುಕೊಂಡು ಹೊಡೆದಿದ್ದೇನೆ. ನನ್ನದೇನೂ ತಪ್ಪಿಲ್ಲ ಅಂತ ಮಾಜಿ ಶಾಸಕ ಎ ಪಾಪಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.