ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ನ.24ರಂದು ಪರೀಕ್ಷೆ ನಡೆದಿದ್ದು, ಅದಾದ 19 ದಿನಗಳಲ್ಲೇ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದಕ್ಕೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ಅಂಕಪಟ್ಟಿ ಪ್ರಕಟಿಸಿದ್ದು, ಅದನ್ನು ವಿಶ್ವವಿದ್ಯಾಲಯಕ್ಕೆ ರವಾನಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
Advertisement
ಒಟ್ಟು 16 ವಿಷಯಗಳ 24 ಹುದ್ದೆಗಳಿಗೆ ಒಟ್ಟು 1,175 ಮಂದಿ ಪರೀಕ್ಷೆ ಬರೆದಿದ್ದರು. ಅಂತಿಮ ಅಂಕಪಟ್ಟಿಯ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ವಿಶ್ವವಿದ್ಯಾಲಯವೇ ಮಾಡಲಿದೆ ಎಂದು ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.