Connect with us

Districts

ಮನೆ ಹಿತ್ತಲಲ್ಲಿ 12 ಕೆ.ಜಿ ಗಾಂಜಾ ಗಿಡ ಬೆಳೆದ ಆರೋಪಿ ಅರೆಸ್ಟ್

Published

on

ರಾಯಚೂರು: ಗಾಂಜಾ ಬೆಳೆ ಬೆಳೆಯುವುದು ನಿಷೇಧವಾಗಿದ್ದರೂ ರಾಯಚೂರಿನ ಕೆಲ ತಾಲೂಕುಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿರುವ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆ ಹಿತ್ತಲಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.

ಲಿಂಗಸಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ಗಾಂಜಾ ಬೆಳೆಯುತ್ತಿರುವುದನ್ನ ಪತ್ತೆ ಮಾಡಿರುವ ಪೊಲೀಸರು, ಸೋಮವಾರ ರಾತ್ರಿ ವೇಳೆ ದಾಳಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ. ಯಾರಿಗೂ ತಿಳಿಯದಂತೆ ಮನೆಯ ಹಿತ್ತಲಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಗೋವಿಂದಪ್ಪನನ್ನ ಲಿಂಗಸುಗೂರು ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರ ದಾಳಿ ಬಗ್ಗೆ ತಿಳಿದ ಇನ್ನೋರ್ವ ಆರೋಪಿ ಗುಂಡಪ್ಪ ಪರಾರಿಯಾಗಿದ್ದಾನೆ.

ದಾಳಿ ವೇಳೆ 20 ಸಾವಿರ ರೂಪಾಯಿ ಮೌಲ್ಯದ 12 ಕೆ.ಜಿ ಗಾಂಜಾ ಗಿಡಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಎಲ್ಲೆ ಗಾಂಜಾ ಬೆಳೆದಿದ್ದಾರೆ ಎಂಬ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *