ರಾಯಚೂರು: ಕೃಷ್ಣಾ ನದಿಯಲ್ಲಿ (Krishna River) ಕ್ಷಣದಿಂದ ಕ್ಷಣಕ್ಕೆ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆ ರಾಯಚೂರಿನ (Raichuru) ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.
ನಾರಾಯಣಪುರ ಜಲಾಶಯದಿಂದ (Narayanpur Dam) ಕೃಷ್ಣಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಒಳಹರಿವು ಹೆಚ್ಚಳವಾಗುತ್ತಿರುವುರಿಂದ ಇಂದು ರಾತ್ರಿಯ ಒಳಗಡೆ 2 ಲಕ್ಷ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಅಪಾರ ಪ್ರಮಾಣದ ನೀರಿನಿಂದ ಕೃಷ್ಣಾ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹ ಭೀತಿ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ರಾಯಚೂರಿಗೆ ಘೋಷಣೆಯಾಗದ ಏಮ್ಸ್ – ಹೋರಾಟಗಾರರಿಂದ ಅಸಮಾಧಾನ
Advertisement
Advertisement
ಲಿಂಗಸುಗೂರಿನ ಶೀಲಹಳ್ಳಿ-ಹಂಚಿನಾಳ ಮಧ್ಯದ ಸೇತುವೆ ಮುಳುಗಡೆಯಾಗಿರುವುದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಶೀಲಹಳ್ಳಿಯಿಂದ ನದಿ ತೀರದ ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಈಗ ಜಲದುರ್ಗ ಮಾರ್ಗವಾಗಿ ತಾಲೂಕು ಕೇಂದ್ರಕ್ಕೆ ಬರಲು ಗ್ರಾಮಸ್ಥರು 45 ಕಿ.ಮೀ ಸುತ್ತವರೆದು ಬರಬೇಕಿದೆ.
Advertisement
Advertisement
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ರಾಯಚೂರು ಜಿಲ್ಲೆಯ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕುಗಳಿಗೆ ಪ್ರವಾಹ (Flood) ಭೀತಿ ಎದುರಾಗಿದೆ.