ರಾಯಚೂರು: ತುಂಗಭದ್ರಾ ಜಲಾಶಯದಿಂದ (Tungabhadra Dam) ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ರಾಯಚೂರು (Raichuru) ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.
ನದಿಯ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿನ ರಾಯರ ಏಕಶಿಲಾ ಬೃಂದಾವನದ (Rayara Brindavana) ಪಾದಗಟ್ಟೆ ಬಳಿ ನೀರು ತಲುಪಿದೆ. ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಪಾದಗಟ್ಟೆ ಮುಳುಗಡೆ ಭೀತಿ ಎದುರಾಗಿದೆ. ಇದರೊಂದಿಗೆ ರಾಘವೇಂದ್ರ ಸ್ವಾಮಿಗಳು ತಪಸ್ಸು ಮಾಡಿದ ಸ್ಥಳವಾದ ಬಿಚ್ಚಾಲಿ ಗ್ರಾಮದಲ್ಲಿನ ಏಕಶಿಲಾ ವೃಂದಾವನ ಈಗ ಜಲಾವೃತವಾಗಿದೆ. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
Advertisement
Advertisement
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ದೂರದಿಂದಲೇ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಭಕ್ತರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಇಲ್ಲಿನ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ.
Advertisement
Advertisement
ನದಿ ಪಾತ್ರದ ಜನರು ಹಾಗೂ ಬೃಂದಾವನದ ಬಳಿ ಬರುವ ಭಕ್ತರು ನದಿಗೆ ಇಳಿಯದಂತೆ, ಸುರಕ್ಷಿತ ಸ್ಥಳದಲ್ಲಿ ಇರುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆ- ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ನಾಮಪತ್ರ ಸಲ್ಲಿಕೆ