ಮುಂಬೈ: ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಡೆದಿದ್ದ ಸಭೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ರೈಲ್ವೆ ಇಲಾಖೆಯ ಟಿಕೆಟ್ ಕಲೆಕ್ಟರ್ (ಟಿಸಿ) ನನ್ನು ಪುಣೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಲೋನಾವಾಲ ರೈಲು ನಿಲ್ದಾಣದ ಉಪೇಂದ್ರಕುಮಾರ್ ಶ್ರೀವೀರ್ ಬಹಾದೂರ್ ಸಿಂಗ್ (39) ಬಂಧಿತ ಟಿಸಿ. ಲೋನಾವಾಲದ ಶಿವಾಜಿ ಚೌಕ್‍ನಲ್ಲಿ ಸ್ಥಳೀಯರು ಶುಕ್ರವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಉಪೇಂದ್ರಕುಮಾರ್ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಪುಣೆ ಗ್ರಾಮಾಂತರ ಠಾಣೆಯ ಪೊಲೀಸರು ಉಪೇಂದ್ರಕುಮಾರ್ ನನ್ನು ಬಂಧಿಸಿದ್ದಾರೆ. ಇದನ್ನು ಓದಿ : ಶ್ರದ್ಧಾಂಜಲಿ ವೇಳೆ ಪಾಕ್ ಪರ ಘೋಷಣೆ – ಗ್ರಾಮಸ್ಥರಿಂದ ಥಳಿತ, ಯುವಕ ಅರೆಸ್ಟ್
Advertisement
Advertisement
ಉಪೇಂದ್ರಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 153 (ಬಿ) ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತರುವ ಹೇಳಿಕೆ ಆರೋಪದ ಅಡಿ ಪ್ರಕರಣ ದಾಖಲಾಗಿದೆ. ಆತನನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಫೆಬ್ರವರಿ 18ರ ವರೆಗೆ ಉಪೇಂದ್ರಕುಮಾರ್‍ನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
Advertisement
ರೈಲ್ವೇ ಇಲಾಖೆಯ ಮುಂಬೈ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಜೈನ್ ಅವರು, ಉಪೇಂದ್ರ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Advertisement
ಲೋನಾವಾಲ ನಗರ ಪೊಲೀಸ್ ಇನ್ಸ್‍ಪೆಕ್ಟರ್ ಬಲ್ವಂತ್ ಪಾಟೀಲ್, ಶ್ರದ್ಧಾಂಜಲಿ ಸಭೆಗೆ ಸಾವಿರಾರು ಜನರು ಸೇರುತ್ತಿದ್ದ ಹಿನ್ನಲೆಯಲ್ಲಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಉಪೇಂದ್ರಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ರೈಲ್ವೇ ಇಲಾಖೆಗೂ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv